ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ : ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್‌ಇಎಸ್ ಎಜುಕೇಷನ್ ಅಸಿಸ್ಟ್ಯಾನ್ಸ್ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2020-21 ನೇ ಶೈಕ್ಷಣಿಕ ಸಾಲಿನ ಸಹಾಯ ಧನ ವಿತರಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಎನ್‌ಇಎಸ್ ಆಡಳಿಯ ಮಂಡಳಿ ವ್ಯಾಪ್ತಿಯ ಶಾಲಾ ಕಾಲೇಜುಗಳ ಸುಮಾರು 364 ವಿದ್ಯಾರ್ಥಿಗಳಿಗೆ 6.5ಲಕ್ಷ ರೂ. ಮೊತ್ತದ ಸಹಾಯ ಧನವನ್ನು ವಿತರಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ ಮಾತನಾಡಿ, ಕಳೆದ ಆರು ವರ್ಷಗಳಿಂದ ಎನ್.ಇ.ಎಸ್ ಎಜುಕೇಷನ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲಕರವಾಗುವಂತೆ ಸಹಾಯ ಧನ ವಿತರಿಸಲಾಗುತ್ತಿದೆ. ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಸಂಸ್ಥೆಗೆ ಕೀರ್ತಿ ತರುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, 75 ವರ್ಷಗಳ ಸಂಭ್ರಮದಲ್ಲಿರುವ ಎನ್‌ಇಎಸ್ ಸಂಸ್ಥೆಯು ತನ್ನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಶೈಕ್ಷಣಿಕ ಕಲಿಕೆಯ ಸಂದರ್ಭದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂಬ ಕಾಳಜಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಧನ ನೀಡುವ ಕಾರ್ಯ ನಮ್ಮ ಈ ಟ್ರಸ್ಟ್ ನಿರ್ವಹಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್‌ಇಎಸ್ ಎಜುಕೇಷನ್ ಅಸಿಸ್ಟ್ಯಾನ್ಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಸಿ.ಆರ್.ನಾಗರಾಜ, ನಿರ್ದೇಶಕರಾದ ರುಕ್ಮಿಣಿ ವೇದವ್ಯಾಸ, ಅಜೀವ ಸದಸ್ಯರಾದ ಡಿ.ಎಸ್.ಅರುಣ್, ಕಿಶೋರ್ ಶೀರನಾಳಿ, ರಾಮಪ್ರಸಾದ್, ಕುಲಸಚಿವರಾದ ಪ್ರೊ.ಟಿ.ಎಸ್. ಹೂವಯ್ಯಗೌಡ, ಸಹಾಯಕ ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post