ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಭೇಟಿ ನೀಡಲಿದ್ದು, ನೀಡಿ ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು.
ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗಲಿದ್ದು, ರಾಜ್ಯದ ವಿವಿಧ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸಿನ ಸಚಿವರ ಬಳಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆ ಸಲುವಾಗಿ ದೆಹಲಿಗೆ ತೆರಳಲಿರುವುದಾಗಿ ಹೇಳಿದರು.
ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿಸಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಬಂದಾಗ ಹಲವಾರು ಯೋಜನೆಗಳ ಬಗ್ಗೆ ಚರ್ಚೆಯಾಗಿತ್ತು. ನಗರ ವಸತಿ ಹಾಗೂ ಮೆಟ್ರೋ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ನಿಫಾ ವೈರಾಣು ಕುರಿತು ಸಂಪೂರ್ಣ ಮಾಹಿತಿ ಪಡೆಯಲು ತಜ್ಞರಿಗೆ ಸೂಚಿಸಲಾಗಿದೆ. ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿಗಾ ಇಡಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಸಂಬಂಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಬಿ.ಬಿ.ಎಂ.ಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post