ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಗೆದ್ದಿದ್ದೇವೆ. ನಾಲ್ಕು ಸೀಟು ಬರುತ್ತೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ಜೆಪಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್‌ಡಿಕೆ ಕ್ಷೇತ್ರಕ್ಕೆ ತಎರಳಿ ಪ್ರಚಾರ ಮಾಡಿದ್ದರು. ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ. ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ. ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು. ಒಂದು ಸೀಟ್ ಬಂದಿದೆ. ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ. ಯಾರೂ ನಿರಾಶೆಯಾಗಬೇಕಿಲ್ಲ ಎಂದರು.
ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲಾ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ. ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು.
ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ನಾವು. ಜಿ.ಟಿ.ದೇವೇಗೌಡ ದೂರ ಇದ್ದಾರೆ. ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ. ನನಗೂ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಜೊತೆ ಮಾತಾನಾಡಿದ್ದೀನಿ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಎಂದು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ. ಹಾಗಾಗಿ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿ.ಟಿ. ದೇವೇಗೌಡ ಜೊತೆ ನಾನು ರಾಜಕೀಯ ಮಾತನಾಡಿಲ. ತಿರುಪತಿಗೆ ಹೋಗಿದ್ದಾಗ ಜಿ.ಟಿ.ದೇವೇಗೌಡ ಸಿಕ್ಕಿದ್ದರು. ಆಗ ನಾನೇ ನೋಡಿ ಕರೆದು ತಮಾಷೆ ಮಾಡಿದ್ದೆ. ನಿನ್ನ ದರ್ಶನ ಇಲ್ಲಿ ಆಯ್ತಲ್ಲಪ್ಪಾ ಎಂದಿದ್ದೆ. ಆಗ ನಿಮ್ಮ ದರ್ಶನ ಆಗಿದ್ದು ಖುಷಿ ಆಯ್ತು ಸರ್ ಅಂದಿದ್ರು ಅಷ್ಟೇ. ಯಾವುದೇ ರಾಜಕೀಯ ಮಾತುಕತೆ ಆಗಿಲ ಎಂದರು.
ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಜೊತೆ ಸೇರಿ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತಾಡಿದ್ದರೆ ಅವರ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ. ಕೋಲಾರ ವಿಚಾರದಲ್ಲಿ ಸಹಿಸಲು ಆಗಲ್ಲ. ಕೀಳಾಗಿ ಮಾತನಾಡಿದ್ದರೆ ಕ್ರಮ ಅನಿವಾರ್ಯವಾಗಿದೆ. ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ:
ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ. ಕುಮಾರಸ್ವಾಮಿ ಜೊತೆಯೂ ಚರ್ಚಿಸಿದ್ದಾರೆ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ. ಬಿಜೆಪಿ ಅವರು ನನ್ನ ಜೊತೆ ಯಾರೂ ಮಾತಾನಾಡಿಲ. ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿದ್ದಾರೆ ಅನಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತಾಡ್ತಾರೆ ನೋಡೋಣ ಎಂದರು.
ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರು ಮಾತನಾಡಿಲ್ಲ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post