ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾಕುತಂದೆಯೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅಷ್ಟೇ ಅಲ್ಲದೆ, ಎದುರು ಮನೆ ಯುವಕನು ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಮಾಳೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್, ಎದುರುಮನೆ ಯುವಕ ಹಾಗೂ ಮಂಜು ಸಂಬಂಧಿ ರಾಮುನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ. ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ ಬಾಲಕಿಯ ಮೇಲೆ ಕಣ್ಣು ಹಾಕಿದ ಮಂಜುನಾಥ್ ಪತ್ನಿ ಇಲ್ಲದ, ಸಂದರ್ಭದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಶುರು ಮಾಡಿದ. ಇದಲ್ಲದೆ ಎದುರು ಮನೆ ಯುವಕ ರಾಮು ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ. ಆರನೇ ತರಗತಿ ಓದುತ್ತಿರುವ ಬಾಲಕಿಯಲ್ಲಾದ ಬದಲಾವಣೆಯನ್ನು ಗಮನಿಸಿದ ಶಿಕ್ಷಕಿಯಿಂದ ಪ್ರಕರಣ ಬೆಳಕಿಗೆ ಬಂದಿದೆ.
ಮಾಳೂರು ಪೊಲೀಸರು ಆರೋಪಿ ಮಂಜುನಾಥ್ ಹಾಗೂ ರಾಮುನನ್ನು ಬಂಧಿಸಿ, ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post