ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಖುದ್ದು ತುರ್ತು ಕಾಳಜಿ ವಹಿಸಿದ್ದು, ಜಿಲ್ಲಾಧಿಕಾರಿಗಳ ಈ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸೆ.೪ರಂದು ಮಂದಗತಿಯ ಶೀತ ಕಾಣಿಸಿಕೊಂಡಿದ್ದು, ಸ್ಥಳೀಯರು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಡಾ.ಎನ್. ನಾಗಾಂಬಿಕಾ ದೇವಿ ಅವರು ಕೋರಿದ ಹಿನ್ನೆಲೆಯಲ್ಲಿ ತಕ್ಷಣ ಖುದ್ದಾಗಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶಿವಕುಮಾರ್ ಭೇಟಿ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಕ್ಷಿಪ್ರಗತಿಯಲ್ಲಿ ನಡೆಸಿ, ವಿದ್ಯಾರ್ಥಿಗಳಲ್ಲಿ ನೆಗಟಿವ್ ವರದಿ ಬಂದಿದೆ. ಈ ನಡುವೆಯೂ ವಿದ್ಯಾರ್ಥಿಗಳೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸುವ ಜೊತೆಗೆ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ಡಾ. ಎನ್. ನಾಗಾಂಬಿಕಾ ಅವರು ಸೆ.೬ರಂದು ಮೆಚ್ಚುಗೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದು, ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















