ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದ್ದಾಗಿರಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸಾಗರ ರಸ್ತೆಯಲ್ಲಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸುಮಾರು 10 ಕೋಟಿ ರೂ. ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನಾ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿಗೆ ಬಂದಿದೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ಉನ್ನತ ಮಟ್ಟಕ್ಕೆ ತಲುಪುತ್ತಿದೆ ಎಂದರು.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿರುದ್ದಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಪಾಲಿಕೆ ಮೇಯರ್ ಸುನೀತ ಅಣ್ಣಪ್ಪ, ಚಿದಾನಂದ ವಠಾರೆ, ಉದ್ಯಮಿಗಳಾದ ಸತ್ಯನಾರಾಯಣ್, ಉಮೇಶ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post