ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದಲ್ಲಿನ ಜಿಕೆಡಬ್ಲು ಲೇಔಟ್ ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಸೆಂಟರ್ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.



ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.



ವಸತಿ ಸಚಿವ ವಿ. ಸೋಮಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವ ಆರ್ ಅಶೋಕ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ, ತೋಟಗಾರಿಕೆ ಸಚಿವ ಮುನಿರತ್ನ, ಅಬಕಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಇತರರು ಉಪಸ್ಥಿತರಿದ್ದರು.



ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















