ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿದರು.


ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ, ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್. ಅರ್.ವಿಶ್ವನಾಥ ಸೇರಿದಂತೆ ಹಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















