No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳನ್ನು ವ್ಯಸನ ಮುಕ್ತರನ್ನಾಗಿಸಲು ಪೊಲೀಸ್ ಇಲಾಖೆ ಸಹಾಯ ಪಡೆದುಕೊಳ್ಳಿ…

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ.ಎಂ. ಲಕ್ಷ್ಮೀಪ್ರಸಾದ್ ಕರೆ

kalpa News by kalpa News
September 14, 2021
in ಶಿವಮೊಗ್ಗ
0
ಮಕ್ಕಳನ್ನು ವ್ಯಸನ ಮುಕ್ತರನ್ನಾಗಿಸಲು ಪೊಲೀಸ್ ಇಲಾಖೆ ಸಹಾಯ ಪಡೆದುಕೊಳ್ಳಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ಸರಿದಾರಿಗೆ ತರುವಲ್ಲಿ ಶಾಲೆಗಳ ಶಿಕ್ಷಕರು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ. ಲಕ್ಷ್ಮೀಪ್ರಸಾದ್ ಕರೆ ನೀಡಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ರ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.



ದೇಶದ ಅಭಿವೃದ್ದಿಗೆ ಬುನಾದಿಯಾಗಿರುವ ಇಂದಿನ ಮಕ್ಕಳು ಮತ್ತು ಯುವಜನತೆ ತಂಬಾಕು ಉತ್ಪನ್ನಗಳ ಚಟ, ಡ್ರಗ್ಸ್‍ನಂತಹ ಮಾದಕ ದ್ರವ್ಯಗಳ ವ್ಯಸನಕ್ಕೆ ಗುರಿಯಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಮಕ್ಕಳು ಈ ರೀತಿ ಮಾದಕ ದ್ರವ್ಯಗಳಿಗೆ ಒಳಗಾಗಲು ಕಾರಣವನ್ನು ಕಂಡು ಹಿಡಿದು, ಮೂಲದಲ್ಲಿಯೇ ಇದರಿಂದ ಅವರನ್ನು ರಕ್ಷಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದರು.

ಆದ ಕಾರಣ ಮಾದಕ ವ್ಯಸನಕ್ಕೆ ಮುಖ್ಯದ್ವಾರವಾಗಿರುವ ಸಿಗರೇಟ್ ಅಥವಾ ಯಾವುದೇ ತಂಬಾಕು ಸೇವನೆಗೆ ಮಕ್ಕಳು ತುತ್ತಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಹದಿವಯಸ್ಸಾದ 14 ರಿಂದ 18 ವಯಸ್ಸಿನಲ್ಲಿ ರೂಢಿಸಿಕೊಂಡ ಹವ್ಯಾಸಗಳೇ ಅವರ ಜೀವನದ ಪೂರ್ತಿ ಉಳಿಯುವ ಕಾರಣ ಈ ವಯಸ್ಸಿನಲ್ಲಿ ಅವರು ಮಾದಕ ವ್ಯಸನಕ್ಕೆ ಒಳಗಾಗದಂತೆ ಪೋಷಕರು ಮತ್ತು ಶಾಲೆಗಳಲ್ಲಿ ಶಿಕ್ಷಕರು ನಿಗಾ ವಹಿಸಬೇಕು ಎಂದರು.


ಮಕ್ಕಳು ಸಾಮಾನ್ಯವಾಗಿ ಒಂದು ಹೊಸ ಅನುಭವ, ಸ್ವಾಧ ಅನುಭವಿಸಲು ಹಾಗೂ ಇತರೆ ಕಾರಣಗಳಿಂದ ಸಿಗರೇಟ್ ಅಥವಾ ತಂಬಾಕು ಸೇವನೆಗೆ ಪ್ರವೇಶಿಸುತ್ತಾರೆ. ಮುಂದೆ ಅದು ಡ್ರಗ್ಸ್, ಕುಡಿತ ಇತರೆ ಮಾದಕ ದ್ರವ್ಯಗಳ ಸೇವನೆಯೆಡೆ ಕರೆದುಕೊಂಡು ಹೋಗುತ್ತದೆ. ಆದ ಕಾರಣ ಮೂಲದಲ್ಲಿಯೇ ಈ ವ್ಯಸನಕ್ಕೆ ತಡೆ ಹಾಕಬೇಕು. ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಚಲನವಲನ, ಚಟುವಟಿಕೆಗಳನ್ನು ಗಮನಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಒಂದು ಪಕ್ಷ ಮಕ್ಕಳು ಮಾತು ಕೇಳುತ್ತಿಲ್ಲವೆಂದಾದರೆ ಪೊಲೀಸ್ ಇಲಾಖೆಗೆ ತಿಳಿಸಿ, ನಾವು ಸಹಕರಿಸುತ್ತೇವೆ. ಈಗ ಶಾಲೆಗಳು ಆರಂಭವಾಗಿದ್ದು ಇಲಾಖೆ ವತಿಯಿಂದ ಶಾಲೆಗಳ ಭೇಟಿ ನೀಡಿ ಮಕ್ಕಳಿಗೆ ಮಾದಕ ವ್ಯಸನ ದುಷ್ಪರಿಣಾಮ ಕುರಿತು ಮನವರಿಕೆ ಮಾಡಲಾಗುವುದು ಎಂದರು.

ಬಹುತೇಕ ಅಪರಾಧ ಪ್ರಕರಣಗಳ ಅಪರಾಧಿಗಳು ಮಾದಕ ವ್ಯಸನಿಗಳಾಗಿರುತ್ತಾರೆ. ಹಾಗೂ ವಾರ್ಷಿಕವಾಗಿ ಸರಾಸರಿ 5500 ಅಪರಾಧ ಪ್ರಕರಣ ದಾಖಲಾಗುತ್ತಿದ್ದು, ಈ ಪೈಕಿ ಶೇ.90 ಅಪರಾಧಿಗಳು, ಶಾಲೆ ಬಿಟ್ಟ ಮಕ್ಕಳಾಗಿರುತ್ತಾರೆ. ಆದ ಕಾರಣ ಮಕ್ಕಳು ಶಾಲೆ ಬಿಡದಂತೆ ನೋಡಿಕೊಳ್ಳಬೇಕು. ಶೈಕ್ಷಣಿಕವಾಗಿ ಮುಂದುವರೆಯುಂತೆ ಶಿಕ್ಷಕರು, ಮುಖ್ಯೋಪಾಧ್ಯಾಯರು ಕ್ರಮ ವಹಿಸಬೇಕು. ಹಾಗೂ ಶಾಲಾ ಸುತ್ತಮುತ್ತ ಮತ್ತು ಎಲ್ಲೆಡೆ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದರು.

ಎನ್.ಟಿ.ಪಿ.ಸಿ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಮಲ್ಲಪ್ಪ.ಓ ಪ್ರಾಸ್ತಾವಿಕ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶಿಕ್ಷಕರು, ಆರೋಗ್ಯ ಇಲಾಖೆಯ ವೈದ್ಯರು, ಪೊಲೀಸರು, ಸಿಬ್ಬಂದಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್ ಮಾಲೀಕರು ಸೇರಿದಂತೆ ವಿವಿಧ ವಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಕಾಯ್ದೆ ಮತ್ತು ತಂಬಾಕು ದುಷ್ಪರಿಣಾಮದ ಬಗ್ಗೆ ನಿಯಮಿತವಾಗಿ ತರಬೇತಿ ನೀಡಲಾಗುವುದು ಎಂದರು.

ಪ್ರತಿ ವರ್ಷ ಶೇ.17 ರಿಂದ 20 ರಷ್ಟು ಹದಿವಯಸ್ಸಿನ ಮಕ್ಕಳು ತಂಬಾಕು ಚಟಕ್ಕೆ ಬಲಿಯಾಗುತ್ತಿದ್ದು, ಇದನ್ನು ತಡೆಯಲು ಮುಖ್ಯವಾಗಿ ಶಾಲಾ ಕಾರ್ಯಕ್ರಮದಡಿ ಮಕ್ಕಳಿಗೆ ತಂಬಾಕಿನ ದುಷ್ಪರಿಣಾಮ ಕುರಿತು ಚಿತ್ರಕಲೆ, ಪ್ರಬಂಧ ಇತರೆ ಚಟುವಟಿಕೆ ಹಮ್ಮಿಕೊಂಡು ಪ್ರಶಸ್ತಿ, ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನಿಯಮಿತವಾಗಿ ತಂಬಾಕು ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುತ್ತಿದೆ. ಶಾಲೆಗಳ 100 ಗಜದೊಳಗೆ ಯಾವುದೇ ತಂಬಾಕು ಅಂಗಡಿ, ಕೇಂದ್ರಗಳು ಇರದಂತೆ, ತಂಬಾಕುಮುಕ್ತ ಶಾಲೆ ನಾಮಫಲಕ, ಸಾರ್ವಜನಿಕ ಧೂಮಪಾನ, ಪ್ರದರ್ಶನ ನಿಷೇಧ ಸೇರಿದಂತೆ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2016 ನೇ ಸಾಲಿನಿಂದ ಈವರೆಗೆ 7400 ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ ರೂ.4,34,000 ದಂಡ ಸಂಗ್ರಹಿಸಲಾಗಿದೆ ಎಂದರು.

ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವಸ್ಯನ ಮುಕ್ತ ಕೇಂದ್ರ ಆರಂಭಿಸಲಾಗಿದ್ದು ಇಲ್ಲಿ ತಂಬಾಕು ಗೀಳಿನಿಂದ ಬಿಡುಗಡೆ ಪಡೆಯಲು ಆಪ್ತಸಮಾಲೋಚನೆ, ಚಿಕಿತ್ಸೆ ನೀಡಲಾಗುತ್ತಿದ್ದು ಈವರೆಗೆ 8 ಸಾವಿರಕ್ಕೂ ಅಧಿಕ ಜನರು ಇದರ ಅನುಕೂಲ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಂ. ರಮೇಶ್ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಮಾದರಿಯಾಗುವಂತೆ ಇದ್ದು ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದು ತಪ್ಪುತ್ತದೆ. ನಗರದ ಶಾಲೆಗಳು ಮಾದಕ ವಸ್ತುಗಳಿಗೆ ಹತ್ತಿರವಾಗಿದ್ದು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ತಂಬಾಕು ಉತ್ಪನ್ನಗಳಲ್ಲಿ 6 ಸಾವಿರ ಮಾರಣಾಂತಿಕ ಮತ್ತು ಕ್ಯಾನ್ಸರ್ ಕಾರಕ ರಾಸಾಯನಿಕ ಅಂಶಗಳಿದ್ದು ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಶಾಲೆಗಳಲ್ಲಿ ಪ್ರಾರ್ಥನೆ ವೇಳೆಯಲ್ಲಿ ಮಕ್ಕಳಿಂದಲೇ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಹೇಳುವ ಪರಿಪಾಠವಾಗಬೇಕು ಆಗ ಅವರಲ್ಲಿ ಅರಿವು ಹೆಚ್ಚಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga SP Lakshmi Prasadಎಸ್‌ಪಿ ಬಿ.ಎಂ. ಲಕ್ಷ್ಮೀಪ್ರಸಾದ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.21ರಂದು ಉದ್ಯಾನನಗರಿಯ ದೊಡ್ಡ ಗಣಪತಿಗೆ 108 ಬಗೆಯ ತಿನಿಸುಗಳ ನೈವೇದ್ಯ ಕಾರ್ಯಕ್ರಮ

Next Post

ದೇಶದ ಕೆಲವು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೋನಾ! ಸಾರ್ವಜನಿಕರಲ್ಲಿ 3ನೇ ಅಲೆಯ ಭೀತಿ…

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದ ಕೆಲವು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೋನಾ! ಸಾರ್ವಜನಿಕರಲ್ಲಿ 3ನೇ ಅಲೆಯ ಭೀತಿ...

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL