ಕಲ್ಪ ಮೀಡಿಯಾ ಹೌಸ್
ಉಡುಪಿ: ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೇ.100ರಷ್ಟು ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ ಗುರಿ ಸಾಧಿಸುವ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾ ಮಹಾಮೇಳದಲ್ಲಿ ಭಾಗವಹಿಸಿ ಲಸಿಕೆ ಪಡೆಯುವಂತೆ ಮಾಧ್ಯಮದ ಮೂಲಕ ಕೋರಲಾಯಿತು. ಎಲ್ಲಾ ಸಮುದಾಯಗಳ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಲಸಿಕಾ ಮಹಾಮೇಳ ಆಯೋಜಿಸುತ್ತಿದ್ದು, ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ಆಯುಷ್ ವೈದ್ಯರು, ಆರೋಗ್ಯ ಸಹಾಯಕರು ಮತ್ತು ಕಾರ್ಯಕರ್ತರು, ಅಂಗನವಾಡಿ ,ಆಶಾ ಕಾರ್ಯಕರ್ತರು, ಎಲ್ಲಾ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರು, ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕ ಸಿಬ್ಬಂದಿ, ನರ್ಸಿಂಗ್ ವಿಧ್ಯಾರ್ಥಿಗಳು, ಸೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು, ಸೌಟ್ಸ್ ಮತ್ತು ಗೈಡ್ಸ್ ನ ಕಾಲೇಜು ವಿಭಾಗದ ರೋವರ್ಸ್ , ರೇಂಜರ್ಸ್, ಶಾಲಾ ಶಿಕ್ಷಕರು ಇದರಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು 10,02,762 ಗುರಿ ಇದ್ದು, ಇದುವರೆಗೆ 8,47,940 (ಶೇ.84.6%) ಮಂದಿಗೆ ಮೊದಲ ಡೋಸ್ ಲಸಿಕೆ ನೀಡಿದ್ದು, ಇದರಲ್ಲಿ 3,45,558 (ಶೇ.34.5%) ಎರಡನೇ ಡೋಸ್ ಪಡೆದಿದ್ದಾರೆ.
ಸಾರ್ವಜನಿಕರಿಗೆ ಲಸಿಕೆ ಪಡೆಯುವ ಕುರಿತಂತೆ ಇರುವ ಯಾವುದೇ ಪ್ರಶ್ನೆ ಮತ್ತು ಸಂದೇಹಗಳನ್ನು ಪರಿಹರಿಸಲು, ಸೆಪ್ಟಂಬರ್ 16 ರಂದು ಪೂರ್ವಹ್ನ 10 ಗಂಟೆಯಿಂದ 11 ಗಂಟೆವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದ್ದು, ದೂರವಾಣಿ.ಸಂಖ್ಯೆ. 9663957222 ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post