ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಉದ್ಯೋಗಗಳನ್ನು ಭರ್ತಿ ಮಾಡದೆ ಯುವಕರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಅಶೋಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ಏಳು ವರ್ಷಗಳ ಅಧಿಕಾರ ನಡೆಸಿ, ಯುವಕರಿಗೆ ಯಾವುದೇ ಉದ್ಯೋಗಗಳನ್ನು ಭರ್ತಿ ಮಾಡದೆ ಅನ್ಯಾಯ ಮಾಡಿದೆ. ಆದ್ದರಿಂದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಪಕೋಡ, ಹಣ್ಣು-ತರಕಾರಿ,ಹೂವು ಮಾರಾಟ ಮಾಡುವ ಅಣಕು ಪ್ರದರ್ಶನದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
ಪ್ರಧಾನಿ ನರೇಂದ್ರ ಮೋದಿಗೆ ನಿರುದ್ಯೋಗದ ದಿನಾಚರಣೆಯ ಶುಭಾಶಯಗಳು ಕೋರುತ್ತಾ, ಈಗಾಗಲೇ ಯುವಕರಿಗೆ ಚುನಾವಣೆ ಸಂದರ್ಭದಲ್ಲಿ ಮಂಕುಬೂದಿ ಹಚ್ಚಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ, ಯುವಕರಿಗೆ ಉದ್ಯೋಗ ನೀಡುವುದನ್ನು ಬಿಟ್ಟು ಕೋಮುಭಾವನೆಗಳ ವಿಚಾರವಾಗಿ ಯುವಕರನ್ನು ದಾರಿ ತಪ್ಪಿಸಿ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸರಿಸುಮಾರು ಶೇಕಡ10ರಷ್ಟು ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು.
ದೇಶದ ಯುವಕರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಹೊರಟರೆ ಅಲ್ಲಿಯೂ ಸಹ ಸರ್ಕಾರ ಯಾವುದೇ ಯೋಜನೆಗಳನ್ನು ರೂಪಿಸದೆ, ಸರ್ಕಾರವನ್ನು ಪ್ರಶ್ನೆ ಮಾಡುವ ಯುವಕರ ಮೇಲೆ ಕೇಸುಗಳನ್ನು ದಾಖಲಿಸುವ ಮುಖಾಂತರ ಸರ್ವಾಧಿಕಾರಿ ಧೋರಣೆಯ ಯುವಕ ವಿರೋಧಿ ಸರ್ಕಾರಯಾಗಿದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ರಮೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ರೇಖಾ ರಂಗನಾಥ್ , ಉತ್ತರ ಬ್ಲಾಕ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಕುಮರೇಶ್ ತೀರ್ಥಳ್ಳಿ, ನಗರ ಬ್ಲಾಕ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾರ್ , ಎಂ. ರಾಹುಲ್ , ಮಹಮದ್ ಎಂ.ರಾಕೇಶ್, ಸುಹಾಸ್ ಗೌಡ, ಶ್ರೀನಿವಾಸ್ ರಘು, ಗಜ, ರಾಹುಲ್ ಸೀಗೆಹಟ್ಟಿ , ಮಸ್ತಾನ್, ಜಮೀಲ್, ನಿಹಾಲ್ , ಚಿನ್ಮಯ್ , ಶಾರುಖ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ , ಗೀತಾ, ಪುಷ್ಪ ರವೀಂದ್ರ ಹಾಗೂ ಯುವ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post