ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ : ಇಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರಾದ ಸುನಿತಾ ಅಣ್ಣಪ್ಪ, ಉಪ ಮಹಾಪೌರರಾದ ಕೆ.ಶಂಕರ್, ಆಯುಕ್ತರಾದ ಚಿದಾನಂದ ವಟಾರೆ ಅವರನ್ನು ಕಾಲೇಜಿನ ಕ್ರೀಡಾಂಗಣದ ಕಛೇರಿಯಲ್ಲಿ ಅಭಿನಂದಿಸಲಾಯಿತು.
ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ನಡೆಸಲು ಉದ್ದೇಶಿಸಿರುವ ಆರೋಗ್ಯ ಕ್ಷೇತ್ರದ ವಿವಿಧ ಕ್ರಿಯಾಶೀಲ ಯೋಜನೆಗಳ ಕುರಿತು ಚರ್ಚಿಸಲಾಯಿತು.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನಾ ರಂಗೇಗೌಡ, ಆಡಳಿತ ಪಕ್ಷದ ನಾಯಕರಾದ ಎಸ್.ಎನ್. ಚನ್ನಬಸಪ್ಪ, ಸದಸ್ಯರಾದ ಸುವರ್ಣ ಶಂಕರ್, ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಅಮರೇಂದ್ರ ಕಿರೀಟಿ, ಖಜಾಂಚಿಗಳಾದ ಸಿ.ಆರ್. ನಾಗರಾಜ, ನಿರ್ದೇಶಕರಾದ ಸುಬ್ರಮಣ್ಯ, ಜೆಎನ್‌ಎನ್‌ಸಿಇ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ಮಂಜುನಾಥ, ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ. ರಜತ್ ಹೆಗಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post