ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್‌ನ ಹಲವು ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟುಮಾಡಿದೆ.


ಯಡಿಯೂರಪ್ಪ ಸುದ್ಧಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಶಾಸಕರೇ ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ನಮ್ಮ ಬಿಜೆಪಿ ಶಾಸಕರನ್ನು ಸೆಳೆಯಲು ಡಿ.ಕೆ. ಶಿವಕುಮಾರ್ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಯಾವ ಯಾವ ಕಾಂಗ್ರೆಸ್ ಶಾಸಕರು ಬರುತ್ತಾರೆ ಎಂಬ ಬಗ್ಗೆ ಶೀಘ್ರದಲ್ಲೇ ನಿಮಗೆ ಗೊತ್ತಾಗುತ್ತದೆ. ಅಧಿಕಾರಕ್ಕಾಗಿ ಕಾಂಗ್ರೆಸ್‌ನವರು ಇವತ್ತು ಸೈಕಲ್ ಏರಿ ವಿಧಾನಸೌಧಕ್ಕೆ ಬರುತ್ತಿದ್ದಾರೆ. ಆದರೆ ಬಿಜೆಪಿಯವರು ಕಾರು, ಸ್ಕೂಟರ್ ಬೈಕ್‌ನಲ್ಲಿ ಅವರಿಗಿಂತ ಮೊದಲು ಬಂದು ವಿಧಾನಸೌಧ ಸೇರಿಕೊಳ್ಳುತ್ತೇವೆ ಎಂದು ಚಟಾಕಿ ಹಾರಿಸಿದರು.


ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 140 ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















