ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನಿಲ್ ಕುಮಾರ್ ಇವರು ಸೆ. 26 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ 26 ರ ಬೆಳಿಗ್ಗೆ 11 ಗಂಟೆಗೆ ಹೆಬ್ರಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ತೀರ್ಥಹಳ್ಳಿಗೆ ಆಗಮಿಸಿ ತೀರ್ಥಹಳ್ಳಿಯ ಭಾರತೀಯ ಜನತಾ ಪಾರ್ಟಿ ಕಚೇರಿ ಭೇಟಿ ಮಾಡುವರು. ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿಯಿಂದ ಹೊರಟು ಶಿಕಾರಿಪುರ ತಾಲ್ಲೂಕಿನ ಈಸೂರಿಗೆ ಮಧ್ಯಾಹ್ನ 3 ಗಂಟೆಗೆ ಆಗಮಿಸಿ ಈಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಕಾರ್ಕಳಕ್ಕೆ ಪ್ರಯಾಣ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















