ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ನಗರದಲ್ಲಿ ಕ್ರೀಡಾ ಸಚಿವ ಕೆ. ಸಿ. ನಾರಾಯಣ್ ಗೌಡ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಮಾಡಲಾಯಿತು.
ಶಿವಮೊಗ್ಗದಲ್ಲಿ ಒಂದೇ ಒಳಾಂಗಣ ಕ್ರೀಡಾಂಗಣವಿದ್ದು ಅದರಲ್ಲಿ ಕೇವಲ ಶಟಲ್ ಬ್ಯಾಡ್ಮಿಂಟನ್ ಗೆ ಮಾತ್ರ ಪ್ರಾಮುಖ್ಯತೆ ದೊರೆಯುತ್ತಿದ್ದು, ಇತರೆ ಒಳಾಂಗಣ ಕ್ರೀಡಾ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಮತ್ತೊಂದು ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಬೇಕಾಗಿದೆ ಎಂದು ವಿನಂತಿಸಲಾಯಿತು.
ರಾಜ್ಯದಲ್ಲಿ ಅಂಗವಿಕಲ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ತರಬೇತಿ ನೀಡಿ ಪ್ರೋತ್ಸಾಹ ನೀಡಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ ಅಂಗವಿಕಲ ಕ್ರೀಡಾಪಟುಗಳು ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಬಹುದು. ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯುವಕ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಪಡಿಸುವ ಯೋಜನೆಯೊಂದನ್ನು ರೂಪಿಸುದಲ್ಲಿ ಯುವಕ ಯುವತಿಯರ ಸಬಲೀಕರಣದ ದೆಸೆಯಲ್ಲಿ ಉದ್ಯೋಗ ಸೃಷ್ಟಿಯೂ ಸಹ ಆಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ. ಶೇಖರ್, ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ಉಪಾಧ್ಯಕ್ಷರಾದ ರಮೇಶ್ ಮತ್ತು ಚಂದನ್, ಶ್ರೀಧರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post