ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಪಕ್ಷದ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಸಮಾವೇಶವನ್ನು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇಂದು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.


ಈ ಸಂದರ್ಭದಲ್ಲಿ ಸಂಸದ ಬಿ. ವೈ. ರಾಘವೇಂದ್ರ ಅವರು ಮುಂಬರುವ ಚುನಾವಣೆಯ ಬಗ್ಗೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಶಿವಮೊಗ್ಗ ಮಲೆನಾಡು ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಶಿಕಾರಿಪುರ ರೈತ ಮೋರ್ಚಾ ಅಧ್ಯಕ್ಷ ಪ್ರೇಮ ಕುಮಾರ್ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಿಂಬೆಗುದ್ದಿ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಕ್ಷೇತ್ರದ ಗ್ರಾ.ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















