ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಉಚ್ಚ ನ್ಯಾಯಾಲಯವು ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ವಿನಾಯಕನಗರದ ದತ್ತ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ ಪಟಾಕಿ ಸಿಡಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಶಿವಪ್ಪನಾಯಕ ವೃತ್ತದಲ್ಲಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಚಾಲಕರಾದ ರಾಜೇಶ್ ಗೌಡ, ಪದಾಧಿಕಾರಿಗಳಾದ ಸಚಿನ್ ರಾಯ್ಕರ್, ಅರವಿಂದರಾವ್, ಮಂಜು ಶೇಟ್, ನಗರ ಅಧ್ಯಕ್ಷ ಸತೀಶ್ ಮಂಚಿ ಮನೆ. ಸುಧಾಕರ್. ನಾಗೇಶ್ ಹಾಗೂ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post