ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೆರಿ ಮುಂಭಾಗ ಶುಕ್ರವಾರದಿಂದ ಹಗಲು ರಾತ್ರಿ ಪ್ರತಿಭಟನಾ ಸತ್ಯಾಗ್ರಹ ನಡೆಸಲಾಗುತ್ತಿದೆ.
ಹೋರಾಟಗಳಿಗೆ ಎಲ್ಲರೂ ಗೌರವಿಸಬೇಕು. ದೇಶದಲ್ಲಿ ನೂರಾರು ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಲೂಕು ಕಚೆರಿ ಮುಂಭಾಗದ ಎಡ ಮತ್ತು ಬಲ ಭಾಗದಲ್ಲಿ ಕಬ್ಬಿಣದ ಗ್ರಿಲ್ ಅಳವಡಿಸಿರುವ ಸ್ಥಳವನ್ನು ಸಾರ್ವಜನಿಕರು ಸತ್ಯಗ್ರಹ ನಡೆಸಲು ಮೀಸಲಿಡುವಂತೆ ಒತ್ತಾಯಿಸಲಾಯಿತು.
ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯಗಳು ಹಲವಾರು ತಿಂಗಳುಗಳಿಂದ ಮಂಜೂರಾತಿಯಾಗದೆ ಸ್ಥಗಿತಗೊಂಡಿವೆ. ಲೋಪಗಳು ಕಂಡುಬಂದರೂ ಸಹ ಸರಿಪಡಿಸದೆ ನಿರ್ಲಕ್ಷ್ಯತನ ವಹಿಸಿರುವ ಸಂಬಂಧಿಸಿದ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ತಾಲೂಕಿನಲ್ಲಿ ಸುಮಾರು 1200ಕ್ಕೂ ಹೆಚ್ಚಿನ ಶೇ.80ರಷ್ಟು ಬಡತನ ಹೊಂದಿರುವ ಕುಟುಂಬಗಳಿಗೆ ಆದಾಯ ಮಿತಿ ಹೆಚ್ಚಾಗಿದೆ ಎಂದು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶ್ರಮ ಜೀವಿಗಳಾದ ಕಟ್ಟಡ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ. ಆದರೆ ಮಧ್ಯವರ್ತಿಗಳು, ಕಾರ್ಮಿಕ ಇಲಾಖೆ ಹಾಗು ನಗರಸಭೆ ಕೆಲ ಭ್ರಷ್ಟ ಅಧಿಕಾರಿಗಳಿಂದ ನಿಜವಾದ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪುತ್ತಿಲ್ಲ. ಈ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಂಡು ನಿಜವಾದ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪಿಸಬೇಕೆಂದು ಮನವಿ ಮಾಡಲಾಯಿತು.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಸತ್ಯಾಗ್ರಹದಲ್ಲಿ ಪ್ರಮುಖರಾದ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂಖಾನ್, ಉಪಾಧ್ಯಕ್ಷರಾದ ಎಂ.ವಿ ಚಂದ್ರಶೇಖರ್, ಬ್ರಹ್ಮಲಿಂಗಯ್ಯ, ಹಾಗು ಸಂಚಾಲಕರಾದ ಶೇಖರ್ ಮತ್ತು ಜಯರಾಂ ಇನ್ನತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post