ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಪ್ರಖ್ಯಾತ ಧಾರವಾಹಿ ಪಾಪ ಪಾಂಡು ಖ್ಯಾತಿಯ ಹಿರಿಯ ಕಲಾವಿದ ಶಂಕರ ರಾವ್(84) ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಇವರು, ನೂರಾರು ಚಲನಚಿತ್ರ ಹಾಗೂ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡ ಕಿರುತೆರೆಯಲ್ಲಿ ದಶಕಗಳಿಂದಲೂ ಭಾರೀ ಖ್ಯಾತವಾಗಿದ್ದ ಪಾಪ ಪಾಂಡು ಧಾರವಾಹಿ ಇವರಿಗೆ ಉತ್ತಮ ಹೆಸರು ತಂದುಕೊಟ್ಟಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















