ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.30ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಮುಂಜಾನೆ 10 ಗಂಟೆಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಲಿರುವ ಅವರು 11 ಗಂಟೆಗೆ ಶಿವಮೊಗ್ಗ ತಲುಪಲಿದ್ದಾರೆ. ಆನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿರುವ ಅವರು, ಆನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post