ನವದೆಹಲಿ, ಅ.13: ಜವಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ದೆಹಲಿ ಪೊಲೀಸರಿಂದ ವರದಿ ಕೇಳಿದೆ.
ಮಂಗಳವಾರದ ರಾತ್ರಿ ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಯೋಗ ಗುರು ರಾಮ್‌ದೇವ್, ಸಾಧ್ವಿ ಪ್ರಜ್ಞಾ, ನಾಥೂರಾಮ್ ಗೋಡ್ಸೆ, ಅಸಾರಾಮ್ ಬಾಪು ಮತ್ತು ಜೆಎನ್‌ಯು ಉಪಕುಲಪತಿ ಜಗದೀಶ್ ಕುಮಾರ್ ಅವರ ಭಾವಚಿತ್ರಗಳನ್ನು ರಾವಣನ ಹತ್ತು ತಲೆಗಳಂತೆ ಬಿಂಬಿಸಿ ಘೋಷಣೆಗಳನ್ನು ಕೂಗಿ ಪ್ರತಿಕೃತಿಯನ್ನು ದಹಿಸಲಾಗಿತ್ತು. ಈ ಪ್ರಕರಣ ಕುರಿತಂತೆ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು.
ಈ ವಿಚಾರದಲ್ಲಿ ಮಾತನಾಡಿರುವ ಉಪಕುಲಪತಿ ಜಗದೀಶ್, ಮೊನ್ನೆ ನಡೆದ ರಾತ್ರಿ ವೇಳೆಯ ಕಾರ್ಯಕ್ರಮದಲ್ಲಿ ಪ್ರತಿಕೃತಿಗಳನ್ನು ದಹಿಸಿರುವ ಪ್ರಕರಣ ಸಂಬಂಧ ತನಿಖೆಗೆ ಸೂಚಿಸಲಾಗಿದೆ ಎಂದಿದ್ದಾರೆ.
Stiff fingers every morning? Your joints may be sending an early warning
Kalpa Media House | Special Article | The alarm rings, and you reach out to switch it off. But your...
Read moreDetails




