ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಮುಂದಿನ ಮೂರಿ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದೆ. ಇದರೊಂದಿಗೆ ಸಮುದ್ರದ ಮೇಲ್ಮೈ ಸುಳಿಗಾಳಯ ಪರಿಣಾಮ ರಾಜ್ಯದ ಬಹಳಷ್ಟು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ.


ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ತೀವ್ರ ಮಳೆ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಸಾಧ್ಯವಾದಷ್ಟು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


ಇನ್ನು ಬೆಂಗಳೂರಿನಲ್ಲಿ ಈಗಾಗಲೇ ಭಾರೀ ಮಳೆ ಸುರಿಯುತ್ತಿದ್ದು, ಉಳಿದ ಮಲೆನಾಡು ಕರಾವಳಿ ಭಾಗದಲ್ಲಿ ನಿನ್ನೆ ಸಂಜೆಯಿಂದಲೇ ತುಂತುರು ಮಳೆ ಬೀಳುತ್ತಿದೆ. ಇದರೊಟ್ಟಿಗೆ ರಾತ್ರಿ ವೇಳೆ ಶೀತಗಾಳಿಯ ಅನುಭವವೂ ಕೆಲವೆಡೆ ಆರಂಭವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















