ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನ ಪರಿಷತ್’ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದೆ.
ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ಪ್ರಕಟಿಸಿದ್ದು, ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದೆ.

ಸ್ಥಳೀಯ ಸಂಸ್ಥೆಗಳಿಂದ ಪರಿಷತ್’ಗೆ ಆಯ್ಕೆಯಾದ 25 ಸದಸ್ಯರ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.
ಶಿವಮೊಗ್ಗ, ಚಿತ್ರದುರ್ಗ, ಬೆಂಗಳೂರು ನಗರ, ಕೊಡಗು, ಕೋಲಾರ, ಮೈಸೂರು, ಬೀದರ್, ಕಲಬುರಗಿ, ಹಾಸನ, ತುಮಕೂರು, ಮಂಡ್ಯ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಸದಸ್ಯರ ಆಯ್ಕೆ ನಡೆಯಲಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















