No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಮೊಬೈಲ್ ಬಳಕೆ ಮಾಡಿ: ನ್ಯಾ. ಮುಸ್ತಫಾ ಹುಸೇನ್ ಕಿವಿಮಾತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 9, 2021
in ಶಿವಮೊಗ್ಗ
0
ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಮೊಬೈಲ್ ಬಳಕೆ ಮಾಡಿ: ನ್ಯಾ. ಮುಸ್ತಫಾ ಹುಸೇನ್  ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಕ್ಕುಗಳೊಂದಿಗೆ ಕರ್ತವ್ಯಗಳನ್ನೂ ಅರಿತು ಅದನ್ನು ಪಾಲಿಸುವುದು ಅತಿ ಮುಖ್ಯವಾಗಿದೆ. ಕಾನೂನಿನ ಪರಿಣಾಮ ತಿಳಿಯಬೇಕಾದರೆ ಅದರ ಅರಿವು ಮುಖ್ಯವಾಗುತ್ತದೆ. ಆದ್ದರಿಂದ ಮಕ್ಕಳಾದಿಯಾಗಿ ಎಲ್ಲರೂ ದಿನನಿತ್ಯದ ಕಾನೂನುಗಳನ್ನು ಅರಿತು, ಇತರರಿಗೂ ತಿಳಿಸುವ ಮೂಲಕ ಕಾನೂನು ಸಾಕ್ಷರತೆ ಹೆಚ್ಚಿಸಬೇಕೆಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ಎ. ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಸೇವಾ ಯೋಜನೆ, ಎಟಿಎನ್‍ಸಿಸಿ ಕಾಲೇಜು, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಎಟಿಎನ್‍ಸಿಸಿ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಿಗೂ ಸಮಾನವಾಗಿ ನ್ಯಾಯ ಒದಗಿಸಲು ಕಾನೂನು ಸೇವೆಗಳ ಅಧಿನಿಯಮವು ರಾಷ್ಟ್ರ ಮಟ್ಟದಿಂದ ತಾಲ್ಲೂಕು ಹಂತದವರೆಗೆ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ಜನ ಸಾಮಾನ್ಯರಲ್ಲಿ ದಿನನಿತ್ಯದ ಕಾನೂನು ಅರಿವು ಮೂಡಿಸುವ ಮತ್ತು ಉಚಿತ ಕಾನೂನು ನೆರವು ನೀಡುವ ಕಾರ್ಯವೆಸಗುತ್ತಿದೆ ಎಂದರು.

ನಾವೆಲ್ಲ ನಮ್ಮ ನೆಲದ ಕರ್ತವ್ಯಗಳನ್ನು ಗೌರವಿಸಬೇಕು. ಆಗ ನೆಮ್ಮದಿ ವಾತಾವರಣ ಸಾಧ್ಯವಾಗುತ್ತದೆ. ಆದ ಕಾರಣ ಹಕ್ಕು, ಕರ್ತವ್ಯಗಳು ಮತ್ತು ಕಾನೂನಿನ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. 18 ವಯಸ್ಸಿನ ಒಳಗಿನ ಮಕ್ಕಳು ದ್ವಿಚಕ್ರ ಅಥವಾ ಇತರೆ ವಾಹನ ಓಡಿಸುವ ಮುನ್ನ ಇದಕ್ಕೆ ಸಂಬಂಧಿಸಿದ ಕಾನೂನುಗಳಾದ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್ ಬಗ್ಗೆ ತಿಳಿದಿರಬೇಕು. ಇದನ್ನು ತಿಳಿಯದೇ ಅಪಘಾತ ಇತರೆ ಅನಾಹುತ ಸಂಭವಿಸಿದಲ್ಲಿ ಇಡೀ ಕುಟುಂಬ ನೋವನ್ನು ಅನುಭವಿಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಮೊಬೈಲ್ ಬಳಕೆ ಗಂಭೀರ ಪರಿಣಾಮ :
ಪ್ರಸ್ತುತ ಮಕ್ಕಳ ಮೊಬೈಲ್ ಬಳಕೆ ಗಂಭೀರ ಪರಿಣಾಮಗಳಿಗೆ ಕಾರಣವಾಗುತ್ತಿದೆ. ಇದರಿಂದ ಅನೇಕ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾಧದ ಸಂಗತಿಯಾಗಿದ್ದು, ಇದಕ್ಕೆ ಕಡಿವಾಣ ಹಾಕದಿದ್ದರೆ ಮಕ್ಕಳು, ಯುವಜನತೆ ಮಾನಸಿಕ, ದೈಹಿಕ ಮತ್ತು ಕಾನೂನಿನ ಸಂಘರ್ಷಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಮೊಬೈಲ್ ಬಳಕೆ ಮಾಡಬೇಕು. ಈ ನಿಟ್ಟಿನಲ್ಲಿ ಅರಿವು ಹೆಚ್ಚಬೇಕು ಎಂದು ಕಿವಿಮಾತು ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಹಾಗೂ ಮನೋವೈದ್ಯೆ ಡಾ. ಪ್ರೀತಿ ವಿ. ಶ್ಯಾನ್‍ಬಾಗ್ ಮಾತನಾಡಿ, ಕಾನೂನಿಗೂ ಮತ್ತು ಮಾನಸಿಕ ಆರೋಗ್ಯಕ್ಕೂ ಹತ್ತಿರದ ನಂಟಿದೆ. ಒಂದು ಅಪರಾಧದ ಹಿಂದೆ ಸಾಮಾನ್ಯವಾಗಿ ಮಾನಸಿಕ ಸ್ಥಿಮಿತ ಇಲ್ಲದಿರುವುದನ್ನು ಕಾಣಬಹುದು. ಆದ ಕಾರಣ ಮಾನಸಿಕ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಬಹುಮುಖ್ಯವಾಗಿದೆ. ಅದರಲ್ಲೂ ಹದಿಹರೆಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪ್ರೌಢಾವಸ್ಥೆಯಲ್ಲಿರುವ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವುದು ಅಗತ್ಯ.

ಮನಸ್ಸು ಮತ್ತು ದೇಹ ಒಟ್ಟೊಟ್ಟಿಗೇ ಬೆಳೆವಣಿಗೆ ಆಗಬೇಕು. ಹದಿ ವಯಸ್ಸಿನ ಮನಸ್ಸು ದ್ವಂದ್ವ ಸ್ಥಿತಿಯಲ್ಲಿರುತ್ತದೆ. ಇದಕ್ಕೆ ಪೂರಕವಾದ ಮಾರ್ಗದರ್ಶನ ಬೇಕು. ಪ್ರಸ್ತುತ ಕಾಲಮಾನದಲ್ಲಿ ಅವಕಾಶಗಳು ಹೆಚ್ಚಿವೆ. ಅದರ ಬಳಕೆ ಹೇಗೆ ಮಾಡಬೇಕು ಎಂಬ ಬಗ್ಗೆ ಮಿತಿ ಮತ್ತು ಮಾರ್ಗವಿಲ್ಲದೇ ಮಕ್ಕಳು ದಾರಿತಪ್ಪುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಮೊಬೈಲ್ ಬಳಕೆ ಅತಿ ಹೆಚ್ಚಾಗಿದ್ದು, ದುರ್ಬಳಕೆ ಆಗುತ್ತಿದೆ. 14, 15 ವಯಸ್ಸಿನ ಮಕ್ಕಳ ಮೊಬೈಲ್ ಅವಲಂಬನೆ ಹೆಚ್ಚಾಗಿದೆ. ಮೊಬೈಲ್ ಇತರೆ ಟೆಕ್ನಾಲಜಿಯ ಗೀಳು ಹೆಚ್ಚಾಗಿ ಮನೋದೈಹಿಕ ಸಮಸ್ಯೆಗಳು ಆಸ್ಪತ್ರೆಯಲ್ಲಿ ದಾಖಲಾಗುತ್ತಿವೆ. ಹಾಗೂ ಈ ರೀತಿ ಗೀಳು ಹತ್ತಿಸಿಕೊಂಡ ಮಕ್ಕಳು ಅಪರಾಧ ಕೃತ್ಯದಲ್ಲಿ ಭಾಗಿಯಾಗಲು ಕೂಡ ಹಿಂಜರಿಯುತ್ತಿಲ್ಲ.

ಮೊಬೈಲ್ ಬಳಕೆಯಿಂದಾಗಿ ಮಕ್ಕಳ ರೋಲ್ ಮಾಡೆಲ್‍ಗಳು ಕೂಡ ಟಿಕ್‍ಟಾಕ್, ಯೂಟ್ಯೂಬರ್ ಗಳಾಗಿದ್ದು ವಾಸ್ತವತೆ ಅರಿಯುವಲ್ಲಿ ಸೋಲುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಕೌಶಲ್ಯ, ಉತ್ತಮ ಹವ್ಯಾಸಗಳು, ಸಾಮಾಜಿಕ ಜವಾಬ್ದಾರಿ, ಕಾನೂನಿನ ಅರಿವು ಮತ್ತು ಮಾನಸಿಕ ಆರೋಗ್ಯದ ಅರಿವು ಹೊಂದಿದಲ್ಲಿ ಮಾತ್ರ ಮಕ್ಕಳಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಿಡಬ್ಲ್ಯುಸಿ ಮತ್ತು ಪಿಎಲ್‍ವಿ ಅಧ್ಯಕ್ಷೆ ಜಿ.ಎಂ. ರೇಖಾ  ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಜಗತ್ತಿನ ಮೂರು ಪ್ರಮುಖ ಅಪರಾಧಗಳಲ್ಲಿ ಒಂದಾಗಿದ್ದು, ದೇಶಾದ್ಯಂತ ಈ ಅಪರಾಧ ನಡೆಯುತ್ತಲೇ ಇದೆ. ಅನಕ್ಷರತೆ, ನಿರುದ್ಯೋಗ, ಬಡತನ ಇತರೆ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿರುವ ದುರ್ಬಲ ವರ್ಗವನ್ನು ಗುರಿಯಾಗಿಸಿಕೊಂಡು ಈ ಕೃತ್ಯವೆಸಲಾಗುತ್ತಿದೆ.
ಆದರೆ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯಲು ಕಾಯ್ದೆ ಕಾನೂನುಗಳಿವೆ. ಇದರಡಿ ಪ್ರಕರಣ ದಾಖಲಾದಾಗ ಮಾತ್ರ ಇದು ಎಷ್ಟು ದೊಡ್ಡ ಅಪರಾಧ ಎಂದು ಅರಿವಾಗುತ್ತದೆ. ಅನೈತಿಕ ತಡೆ ಕಾಯ್ದೆ 1887, 2012 ರ ತಿದ್ದುಪಡಿ ಹಾಗೂ ಇದೀಗ 2021 ರಲ್ಲೂ ತಿದ್ದುಪಡಿಯಾಗುತ್ತಿದ್ದು ನೊಂದ ಮಹಿಳೆಯರು ಮತ್ತು ಮಕ್ಕಳಿಗೆ ಕಾಯ್ದೆಯಡಿ ರಕ್ಷಣೆ, ಕಾನೂನು ನೆರವು ಸೇರಿದಂತೆ ಹಲವು ಸೌಲಭ್ಯಗಳಿವೆ.

ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಗುರುತಿಸಲಾದ ಎನ್‍ಜಿಓ ಯಿಂದ ಸಂತ್ರಸ್ತರಿಗೆ ನೆರವು ಮತ್ತ ಪುನರ್ವಸತಿ ಸಿಗುತ್ತದೆ. ಹಾಗೂ 2014 ರಲ್ಲಿ ಜಿಲ್ಲೆಯಲ್ಲಿ ಆರಂಭವಾದ ಸಖಿ-ಒನ್ ಸ್ಟಾಪ್ ಸೆಂಟರ್‍ನಲ್ಲಿ ವೈದ್ಯಕೀಯ, ಕಾನೂನು, ಪೊಲೀಸ್, ಆಪ್ತಸಮಾಲೋಚನೆ ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಒಂದೇ ಸೂರಿನಡಿ ಎಲ್ಲ ರೀತಿಯ ನೆರವು ದೊರಕಲಿದೆ. ಆದರೆ ಅಪರಾಧಕ್ಕೂ ಮುನ್ನ ಇದರ ತಡೆ ಬಹು ಮುಖ್ಯವಾಗಿದೆ.

ಆದ ಕಾರಣ ಹೆಣ್ಣುಮಕ್ಕಳು ಯಾರಾದರೂ ಅನವಶ್ಯಕವಾಗಿ ಉಡುಗೊರೆ ನೀಡುತ್ತಿದ್ದರೆ, ಆಸೆ ಆಮಿಷ ತೋರುತ್ತಿದ್ದರೆ ಇದರಿಂದ ಎಚ್ಚೆತ್ತುಕೊಂಡು ಹಿರಿಯರ ಅಥವಾ ಸಹಾವಯವಾಣಿಗಳ ಸಹಾಯ ಪಡೆಯಬೇಕು. ಕಾಯ್ದೆಯಡಿ ಅಪರಾಧ ಸಾಬೀತಾದಲ್ಲಿ 7 ವರ್ಷದವರೆಗೆ ಜೀವಾವಧಿ ಸಜೆ ಮತ್ತು ದಂಡ ಹಾಕಲಾಗುವುದು. ಮಕ್ಕಳ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ 1098 ಮತ್ತು ಮಹಿಳೆಯರ ದೌರ್ಜನ್ಯ ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ 181 ಸಹಾಯವಾಣಿ ಹಾಗೂ ಪೊಲೀಸ್ ಸಹಾಯವಾಣಿ 112 ಗೆ ಯಾವುದೇ ಅಳುಕಿಲ್ಲದೆ ಕರೆ ಮಾಡಬೇಕು. ಕರೆ ಮಾಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹಾಗೂ ಕಾಯ್ದೆಯನ್ವಯ ಸಂತ್ರಸ್ತರ ಗುರುತನ್ನು ಸಹ ಎಲ್ಲೂ ಬಹಿರಂಗಪಡಿಸುವ ಹಾಗಿಲ್ಲ.

ವಿಶೇಷವಾಗಿ ಮಕ್ಕಳು ಇಂದು ಮೊಬೈಲ್, ಆನ್‍ಲೈನ್ ಚಾಟ್ ಇತ್ಯಾದಿಯಿಂದ ಎಚ್ಚರಿಕೆಯಿಂದ ಇರಬೇಕು. ಮೊಬೈಲ್ ದುರ್ಬಳಕೆಯಿಂದ ಅನೇಕ ಪ್ರಕರಣ ದಾಖಲಾಗುತ್ತಿದ್ದು, ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಮಕ್ಕಳು ಈ ಬಗ್ಗೆ ಎಚ್ಚೆತ್ತುಕೊಂಡು ಇತರರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಹಿರಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಂವಿಧಾನ ಸರ್ವರಿಗೂ ಸಮನಾದ ನ್ಯಾಯ ಒದಗಿಸಿದೆ. ಜಾತಿ, ಮತ, ವರ್ಗ ಇತರೆ ಯಾವುದೇ ತಾರತಮ್ಯವಿದಲ್ಲದೇ ಸಮನಾದ ನ್ಯಾಯ ಒದಗಿಸುವ ಪರಿಕಲ್ಪನೆಯಿಂದ ರಾಷ್ಟ್ರ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೆ ಉಚಿತವಾಗಿ ನ್ಯಾಯದಾನ ಮಾಡುವ ಕಾನೂನು ಸೇವಾ ಪ್ರಾಧಿಕಾರಗಳ ಸ್ಥಾಪನೆಯಾಗಿದ್ದು, ಇವುಗಳ ಮೂಲಕ ಪ್ರತಿ ದಿನ ಜನಸಾಮಾನ್ಯರಿಗೆ ಅಗತ್ಯ ಕಾನೂನುಗಳ ಅರಿವು ಮತ್ತು ಅಗತ್ಯ ಜನತೆಗೆ ಉಚಿತ ಕಾನೂನು ನೆರವನ್ನು ಒದಗಿಸಲಾಗುತ್ತಿದೆ.

ಕಾನೂನು ಸೇವೆಗಳ ಅಧಿನಿಯಮ 09-11-1995 ರಲ್ಲಿ ಜಾರಿಗೆ ಬಂದ ಅಂಗವಾಗಿ ಇಂದು ರಾಷ್ಟ್ರೀಯ ಕಾನೂನು ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ಎಲ್ಲ ಹಳ್ಳಿ ಹಳ್ಳಿಗಳಲ್ಲಿ ಒಂದೂವರೆ ತಿಂಗಳ ಕಾಲ ಪ್ರತಿ ನಿತ್ಯ ಕಾನೂನು ಅರಿವು ಕಾರ್ಯಕ್ರಮ, ವಿವಿಧ ಶಿಬಿರ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆಯಬೇಕೆಂದರು.

ಕಾರ್ಯಕ್ರಮದಲ್ಲಿ ಎಟಿಎನ್‍ಸಿಸಿ ಕಾಲೇಜು ಪ್ರಾಂಶುಪಾಲ ಪ್ರೊ.ಹೆಚ್.ಎಂ. ಸುರೇಶ್, ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಅಶ್ವಥ್ ನಾರಾಯಣ ಶೆಟ್ಟಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಟಿಎನ್‍ಸಿಸಿ ಕಾರ್ಯಕ್ರಮಾಧಿಕಾರಿ ಪ್ರೊ.ಕೆ.ಎಂ.ನಾಗರಾಜು ಸ್ವಾಗತಿಸಿದರು. ಪಿಯು ಮತ್ತು ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share247Tweet123Send
Previous Post

ಮಿನಿ ಕದನ: ವಿಧಾನ ಪರಿಷತ್ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ

Next Post

ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರದ ವೇದಿಕೆಗೆ ಪುನೀತ್ ರಾಜ್ ಕುಮಾರ್ ‌ ಹೆಸರು: ನಿರಾಣಿ ತೀರ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರದ ವೇದಿಕೆಗೆ ಪುನೀತ್ ರಾಜ್ ಕುಮಾರ್ ‌ ಹೆಸರು: ನಿರಾಣಿ ತೀರ್ಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL