ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು. ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದಲ್ಲಿ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದಿದ್ದಾರೆ.


ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಫೇಸ್ ವಿಡಿಯೋ ಮೂಲಕ ಹಂಸಲೇಖ ಅವರು ಕ್ಷಮೆಯಾಚಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















