ಕಲ್ಪ ಮೀಡಿಯಾ ಹೌಸ್ | ಸೊರಬ |
ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ.

ಕಾನುಗೋಡು ಗ್ರಾಮದ ಜೀವ (13) ಮೃತ ದುರ್ಧೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















