ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಒಂದು ಲಕ್ಷ ರೂ ಪರಿಹಾರ, ಹಾಗೂ ಭಾಗಶಃ ಮನೆ ಕಳೆದುಕೊಂಡವರಿಗೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚಾಲ್ತಿಯಲ್ಲಿರುವ ನಿಯಮದ ಪ್ರಕಾರ ಮಳೆಯಿಂದ ಸಂಪೂರ್ಣ ಮನೆ ಕುಸಿದು ಬಿದ್ದಿದ್ದರೆ ಅಂತಹ ಮನೆಗಳಿಗೆ 5 ಲಕ್ಷ ರೂ., ಭಾಗಶಃ ಕುಸಿದು ಬಿದ್ದಿದ್ದರೆ 3 ಲಕ್ಷ ರೂ., ಸಣ್ಣಪುಟ್ಟ ಹಾನಿಯಾಗಿದ್ದರೆ 50,000 ಪರಿಹಾರ ನೀಡಲಾಗುವುದು ಜೊತೆಗೆ ಮಳೆಯಿಂದ ಹಾನಿಯಾದ ಮನೆಗಳ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು
ಮಳೆಯಿಂದ ಹಾಳಾದ ರಸ್ತೆ ಸೇತುವೆ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸರಿ ಸುಮಾರು 5 ಲಕ್ಷ ಕ್ಕೂ ಅಧಿಕ ಹೆಕ್ಟೇರ್ ಬೆಳೆ ನಾಶವಾಗಿದೆ. ಬೆಳೆ ಪರಿಹಾರ ಕುರಿತಂತೆ ಸಮೀಕ್ಷೆ ನಡೆಸಿ ಅಧಿಕಾರಿಗಳು ಪರಿಹಾರ ಸಾಪ್ಟ್ ವೇರ್ ನಲ್ಲಿ ಮಾಹಿತಿಯನ್ನು ದಾಖಲು ಮಾಡುತ್ತಿದ್ದಂತೆ ಪರಿಹಾರ ನೀಡುವ ಕೆಲಸ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.
ತ್ವರಿತಗತಿಯಲ್ಲಿ ಕ್ರಮಕ್ಕೆ ಸೂಚನೆ.
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿಗಳು ಮತ್ತು ಆಯಾ ಇಲಾಖೆಯ ಸಂಬಂಧಪಟ್ಟ ಸಚಿವರಿಗೆ ಮಾತ್ರ ಅನುಮತಿ ನೀಡಿದೆ. ಇಂದಿನಿಂದ ತ್ವರಿತಗತಿಯಲ್ಲಿ ನೆರೆ ಪರಿಶೀಲನೆ ನಡೆಸಿ. ನೆರೆ ಪೀಡಿತ ಪ್ರದೇಶದಲ್ಲಿ ಪರಿಶೀಲನೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post