ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು ಇಂದು ನಾಮಪತ್ರವನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್.ನಾಗರಾಜ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಷ ತಮಗೆ ಟಿಕೆಟ್ ನೀಡುವ ಭರವಸೆಯಿಂದಾಗಿ ತಾವು ನಾಮಪತ್ರ ಸಲ್ಲಿಸಿದ್ದು , ಆದರೆ ಪಕ್ಷ ಅಧಿಕೃತವಾಗಿ ಹಾಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಅವರಿಗೆ ಅನುಮತಿ ನೀಡಿದೆ . ಈ ಹಿನ್ನಲೆಯಲ್ಲಿ ತಾವು ನಾಮಪತ್ರ ವಾಪಸ್ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ , ರಾಜ್ಯ ಸೇವಾದಳದ ಅಧ್ಯಕ್ಷ ರಾಮಚಂದ್ರ , ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ಸೂಚನೆಯ ಮೇರೆಗೆ ಮತ್ತು ಪಕ್ಷದ ಸಿದ್ಧಾಂತಗಳಿಗೆ ಒಳಪಟ್ಟು ಈ ನಿರ್ಧಾರ ತೆಗೆದುಕೊಂಡಿದ್ದು , ಪಕ್ಷದ ಅಧಿಕೃತ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ತಿಳಿಸಿದರು .

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















