ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜಸೇವಾ ಚಟುವಟಿಕೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯ ಎಂದು ಲೆಕ್ಕ ಪರಿಶೋಧಕ ಸಂಘದ ಅಧ್ಯಕ್ಷ ಸಿ. ಆರ್. ವಸಂತ್‌ಕುಮಾರ್ ಹೇಳಿದರು.
ನಗರದ ನೂರು ಅಡಿ ರಸ್ತೆಯಲ್ಲಿರುವ ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ವಿಸ್ತರಣಾ ಕಟ್ಟಡದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿನಿತ್ಯದ ಜೀವನದಲ್ಲಿ ವ್ಯವಹಾರದ ಜತೆಯಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಮ್ಮ ಕೈಲಾದಷ್ಟು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಫ್ರೆಂಡ್ಸ್ ಸೆಂಟರ್ ವತಿಯಿಂದ ನಿರಂತರವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅನೇಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ಫ್ರೆಂಡ್ಸ್ ಸೆಂಟರ್ ವತಿಯಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಸುತ್ತಿದೆ. ರಕ್ತದಾನ ಶಿಬಿರಗಳನ್ನು ನಡೆಸುವ ಮೂಲಕ ರಕ್ತದಾನದ ಜತೆಯಲ್ಲಿ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳವಳಿಕೆ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಫ್ರೆಂಡ್ಸ್ ಸೆಂಟರ್ ಮುಖಾಂತರ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳಿಗೆ ಎಲ್ಲರ ಸಹಕಾರವು ಅಗತ್ಯ. ಎಲ್ಲರೂ ಒಟ್ಟುಗೂಡಿ ಒಳ್ಳೆಯ ಸೇವಾ ಕಾರ್ಯಗಳನ್ನು ನಡೆಸಬೇಕಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯ ಸೇವಾ ಕಾರ್ಯ ನಿರಂತರವಾಗಿರಲಿದೆ ಎಂದರು.
ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ ವೆಂಕಟೇಶ್, ಶ್ರೀನಿಧಿ, ಎಂ.ಎನ್. ವೆಂಕಟೇಶ್ ಕಾಮತ್, ವೀರಣ್ಣ, ವಸಂತ್‌ಕುಮಾರ್, ರವೀಂದ್ರನಾಥ್ ಐತಾಳ್, ನೇತ್ರ ಮತ್ತು ರಕ್ತ ಭಂಡಾರದ ಕಾರ್ಯದರ್ಶಿ ಜಿ. ವಿಜಯ್‌ಕುಮಾರ್, ಮೋಹನ್, ದಿನಕರ್, ಕಾರ್ಯದರ್ಶಿ ಆರ್. ಎಸ್ ಗೋಪಾಲ ಕೃಷ್ಣಾ ಲೆಕ್ಕ ಪರಿಶೋಧಕ ಸಂಘದ ಶರತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post