ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಎನ್ ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್)ಯ 73ನೇ ವಾರ್ಷಿಕೋತ್ಸವದ ಅಂಗವಾಗಿ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರ ಮತ್ತು ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ವತಿಯಿಂದ ಜ್ಞಾನಸಹ್ಯಾದ್ರಿಯ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕುವೆಂಪು ವಿವಿ ವ್ಯಾಪ್ತಿಯ ವಿವಿಧ ಕಾಲೇಜುಗಳ ಸುಮಾರು 50ಕ್ಕೂ ಹೆಚ್ಚು ಎನ್ ಸಿಸಿ ಕೆಡೆಟ್ ಗಳು ರಕ್ತದಾನ ಮಾಡಿದರು. ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನ ಡಾ. ಕಾವ್ಯ, ಡಾ. ಫರ್ಹೀನ, ಕುವೆಂಪು ವಿವಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಷಾರಾಣಿ, ಡಾ. ಶ್ರೀರಕ್ಷಾ, ಆರೋಗ್ಯ ಸಿಬ್ಬಂದಿ, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post