ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ಸರ್ಕಾರದ ಜಲಶಕ್ತಿ ಅಭಿಯಾನ ಮತ್ತು ರಾಷ್ಟ್ರೀಯ ನೀರು ನಿಯೋಗ ಯೋಜನೆ ಅಡಿಯಲ್ಲಿ, ನೆಹರು ಯುವ ಕೇಂದ್ರ ಶಿವಮೊಗ್ಗದ ಕಚೇರಿಯಲ್ಲಿ ಜಿಲ್ಲಾ ಯುವ ಅಧಿಕಾರಿ ಮತ್ತು ಎಲ್ಲ ತಾಲ್ಲೂಕಿನ ರಾಷ್ಟ್ರೀಯ ಯುವ ಕಾರ್ಯಕರ್ತರು ಜೊತೆಗೂಡಿ “ಮಳೆ ನೀರು ಸಂರಕ್ಷಣೆ ಹಾಗೂ ಮಳೆ ನೀರಿನ ಸಮಗ್ರ ನಿರ್ವಹಣೆ”ಯ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಬೀದಿ ನಾಟಕ, ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಮೂಲಕ ಮಳೆ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ ಉಲ್ಲಾಸ್ ಕಾರ್ಯಕತರ್ಕರಿಗೆ ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post