ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಂದಂಕಿಯಲ್ಲಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇದೀಗ ದಿಢೀರನೇ ಏರಿಕೆಯಾಗಿದೆ.

ಹೌದು… ನಗರ ಖಾಸಗಿ ನರ್ಸಿಂಗ್ ಕಾಲೇಜಿನ ೨೩ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇವರೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ.

ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜು ಹಾಗೂ ಗಾಡಿಕೊಪ್ಪದಲ್ಲಿರುವ ಖಾಸಗಿ ಆಸ್ಪತ್ರೆಯ ಒಪಿಡಿಯನ್ನು ಬಂದ್ ಮಾಡಲಾಗಿದೆ. ಆಸ್ಪತ್ರೆ, ಕಾಲೇಜು ಹಾಗೂ ಅಲ್ಲಿನ ಎಲ್ಲಾ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















