No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಬೆಳಗಾವಿ ಅಧಿವೇಶನದಲ್ಲಿ ಸಮಸ್ಯೆಗಳಿಗೆ ದಿಟ್ಟ ಕ್ರಮ ತೆಗೆದುಕೊಳ್ಳುವಂತೆ ಎಎಪಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2021
in ಭದ್ರಾವತಿ
0
ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅದಿವೇಶನದಲ್ಲಿ ರೈತರ ಅತ್ಯಂತ ಅಗತ್ಯವಾಗಿರುವ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು. ಹಾಗೂ ಬೆಳೆ ಹಾನಿ, ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿ, ಕಬ್ಬು ಬೆಳೆಗಾರರಿಗೆ ಬಾಕಿ ಸೇರಿದಂತೆ ಸಾರ್ವಜನಿಕರ ಹಲವು ಸಮಸ್ಯೆಗಳ ಕುರಿತು ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಆಗ್ರಹಿಸಿದೆ.

ಬೆಳೆ ಪರಿಹಾರ:

ಜಿಲ್ಲಾಡಳಿತಗಳ ಅಧಿಕೃತ ವರದಿ ಪ್ರಕಾರ, 2021ರಲ್ಲಿ ರಾಜ್ಯಾದ್ಯಂತ 7.89 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 6,207 ಕೋಟಿ ರೂಪಾಯಿ ಮೊತ್ತದ ಆಹಾರ ಬೆಳೆ, 1.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 1,348 ಕೋಟಿ ರೂಪಾಯಿ ಮೊತ್ತದ ತೋಟಗಾರಿಕೆ ಬೆಳೆ ಹಾಗೂ 74,530 ಹೆಕ್ಟೇರ್‌ ಪ್ರದೇಶದಲ್ಲಿ 1,401 ಕೋಟಿ ರೂಪಾಯಿ ಮೊತ್ತದ ವಾಣಿಜ್ಯ ಬೆಳೆ ಮಳೆಯಿಂದ ನಾಶವಾಗಿದೆ. ಸರ್ಕಾರದ ಅವೈಜ್ಞಾನಿಕ ಮಾನದಂಡಗಳಿಂದಾಗಿ ಅನೇಕ ಸಂತ್ರಸ್ತ ರೈತರು ಪರಿಹಾರದಿಂದ ವಂಚಿತರಾಗುತ್ತಿದ್ದಾರೆ. ಕೊಯ್ಲು ಮಾಡಿದ ನಂತರ ಮಳೆಯಿಂದ ಹಾನಿಗೊಂಡ ಬೆಳೆಯನ್ನು ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. 2015ರಲ್ಲಿ ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನಿಗದಿಯಾದ ಪರಿಹಾರ ಮೊತ್ತವನ್ನೇ ಈಗಲೂ ನೀಡಲಾಗುತ್ತಿದೆ. ದೆಹಲಿ ಸರ್ಕಾರವು ಹೆಕ್ಟೇರ್‌ಗೆ 50,000 ರೂ. ಪರಿಹಾರ ನೀಡಿದರೆ, ಕರ್ನಾಟಕ ಸರ್ಕಾರವು ಕೇವಲ 6,800 ರೂಪಾಯಿಯಿಂದ 13,500ರವರೆಗೆ ಪರಿಹಾರ ನೀಡುತ್ತಿದೆ ಇದರ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ:

ಶಿವಮೊಗ್ಗ ಜಿಲ್ಲೆ ಸೇರಿದಂತೆ 2021ರಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 20,083 ಮನೆಗಳು ಹಾನಿಗೊಳಗಾಗಿವೆ. ಈ ಪೈಕಿ 7,795 ಮನೆಗಳು ಸಂಪೂರ್ಣ ಹಾನಿಯಾಗಿವೆ. 2019ರಲ್ಲಿ ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದಿಂದ ಹಾನಿಗೊಂಡ ಮನೆಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದನ್ನು ನಂಬಿಕೊಂಡು ಮನೆ ಕಟ್ಟಲು ಆರಂಭಿದ ಸಂತ್ರಸ್ತರಿಗೆ ಕೇವಲ ಒಂದು ಲಕ್ಷ ಪರಿಹಾರ ದೊರೆತಿದೆ. ಮನೆ ನಿರ್ಮಾಣ ಅರ್ಧಕ್ಕೆ ಸ್ಥಗಿತಗೊಂಡಿದ್ದರಿಂದ ಶೆಡ್‌ಗಳಲ್ಲಿ ವಾಸವಾಗಿರಬೇಕಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಬಾಕಿ:
ಕಳೆದ ವರ್ಷ 600 ಕೋಟಿ ರೂ. ಸೇರಿದಂತೆ ಕಬ್ಬು ಬೆಳೆಗಾರರಿಗೆ ಒಟ್ಟು 2,500 ಕೋಟಿ ರೂಪಾಯಿಯನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ.  ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿಡಿತದಲ್ಲಿದೆ. ಆದ್ದರಿಂದಲೇ ರೈತರಿಗೆ ಹಣ ದೊರಕಿಸಿಕೊಡಲು ನಿರ್ಲಕ್ಷ್ಯ ತೋರುತ್ತಿದೆ. ಬಾಕಿಯಿರುವ ಎಲ್ಲ ಮೊತ್ತವನ್ನು ಶೇ. 15 ಬಡ್ಡಿಯೊಂದಿಗೆ ತಕ್ಷಣವೇ ಪಾವತಿ ಮಾಡುವಂತೆ ರಾಜ್ಯ ಸರ್ಕಾರವು ಕಾರ್ಖಾನೆಗಳಿಗೆ ಆದೇಶಿಸಬೇಕು ಎಂದು ಕೋರಿದ್ದಾರೆ.

ರಸ್ತೆ ಕಾಮಗಾರಿ ಖರ್ಚುವೆಚ್ಚಗಳ ಪರಿಶೀಲನೆ:
ಶಿವಮೊಗ್ಗ ಜಿಲ್ಲೆ ಹಾಗು ಇತರೆ ತಾಲ್ಲೂಕ್ ಸೇರಿದಂತೆ ಬೆಂಗಳೂರು ಸೇರಿ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,000 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿಯವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.  ಅಷ್ಟು ಹಣ ಖರ್ಚು ಮಾಡಿದ ನಂತರವೂ ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳ ತುಂಬಾ ಗುಂಡಿಗಳಿವೆ. ಗುಂಡಿಗಳಿಗೆ ಹಾಕಲಾಗಿದ್ದ ತೇಪೆಯು ಸಣ್ಣ ಮಳೆಗೆ ಕಿತ್ತುಹೋಗಿದೆ. ವಾಹನ ಸವಾರರು ಕೈಕಾಲು ಮುರಿದುಕೊಳ್ಳುತ್ತಿದ್ದಾರೆ. ಕೆಲವರ ಪ್ರಾಣವೇ ಹೋಗಿದೆ. ಆ ಬೃಹತ್‌ ಮೊತ್ತವು ಯಾರ ಜೇಬು ಸೇರಿದೆ. ಯಾವ್ಯಾವ ಸಚಿವರು, ಶಾಸಕರು, ಅಧಿಕಾರಿಗಳ ಪಾಲೆಷ್ಟು ಎಂಬುದು ಜನರಿಗೆ ತಿಳಿಯಬೇಕು. ರಸ್ತೆ ಕಾಮಗಾರಿ ಕುರಿತು ಖರ್ಚುವೆಚ್ಚಗಳ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳಿದ್ದಾರೆ.

ಗುತ್ತಿಗೆ ಕಾಮಗಾರಿಗಳ ಮೊತ್ತದಲ್ಲಿ ಶೇ. 40ರಷ್ಟು  ಅಕ್ರಮವಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣರವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಸಚಿವರಿಗೆ ಶೇ. 5ರಷ್ಟು. ಸಂಸದರಿಗೆ ಶೇ.2ರಷ್ಟು, ಸ್ಥಳೀಯ ಜನಪ್ರತಿನಿಧಿಗಳಿಗೆ ಶೇ.10ರಷ್ಟು, ಬಿಲ್‌ ಪಾವತಿಸುವ ಅಧಿಕಾರಿಗಳಿಗೆ ಶೇ.6ಷ್ಟು ಹೀಗೆ ಶೇ. 40ರಷ್ಟು ಹಣವು ಲೂಟಿ ಆಗುತ್ತಿರುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತನಿಖೆಗೆ ಆದೇಶಿಸಿದ್ದಾರೆ. ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಅವರ ನೇತೃತ್ವದಲ್ಲೇ ತನಿಖೆ ನಡೆದರೆ ಸತ್ಯ ಹೊರಬರುವುದಿಲ್ಲ. ಇದೊಂದು ಗಂಭೀರ ವಿಚಾರವಾಗಿದ್ದು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರು ಗಳಿಂದ ನ್ಯಾಯಾಂಗ ತನಿಖೆಯಾಗಬೇಕು. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರದಲ್ಲಿ ನಡೆದ ಗುತ್ತಿಗೆಗಳ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಮಹಿಳೆಯರ ರಕ್ಷಣೆಯಲ್ಲಿ ಗೃಹ ಇಲಾಖೆ ವೈಫಲ್ಯ:
ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. ಅಂದರೆ ಪ್ರತಿದಿನ ಒಂದಕ್ಕಿಂತ ಹೆಚ್ಚು ಮಹಿಳೆಯರ ಮೇಲೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದಾರೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ. ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಈ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

79 A ಮತ್ತು B ಕಾಯ್ದೆಯನ್ನು ಪುನರ್ ಸ್ಥಾಪಿಸುವುದು:
ಕೊರೋನಾ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಸುಗ್ರೀವಾಜ್ಞೆ ಮೂಲಕ ಭೂ ಪರಿಮಿತಿ ಕಾಯ್ದೆಯ 79 A ಮತ್ತು B ತಿದ್ದುಪಡಿ ಮಾಡಿ ಈ ಅಕ್ರಮ ಕಪ್ಪುಹಣದಿಂದ ಖರೀದಿಸಿರುವ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಭೂಸಂಪತ್ತನ್ನು ಸಕ್ರಮಗೊಳಿಸಿರುವ ಪರಿ ನಿಜಕ್ಕೂ ಖೇದಕರ. ಈ ಕೂಡಲೇ ಸುಗ್ರೀವಾಜ್ಞೆಯನ್ನು ಹಿಂಪಡೆದುಕೊಂಡು ನ್ಯಾಯಾಲಯಗಳಲ್ಲಿ ಅಂತಿಮ ಹಂತದಲ್ಲಿರುವ ಈ ಎಲ್ಲಾ ದಾವೆಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಡೆದುಕೊಳ್ಳುವುದು.

ಕೊರೋನಾ ಸಂದರ್ಭದಲ್ಲಿನ ಔಷಧಿ ಮತ್ತು ಉಪಕರಣಗಳ ಖರೀದಿ ಹಗರಣಗಳ ಸದನ ಸಮಿತಿಯ ವರದಿಯನ್ನು ಮಂಡಿಸಿ ಸದನದಲ್ಲಿ ಚರ್ಚೆ ಮಾಡಲೇಬೇಕು.

ಎ ಪಿ ಎಂ ಸಿ ಕಾಯ್ದೆಗೆ ತಿದ್ದುಪಡಿ ರದ್ದತಿ:
ಕಾಳಸಂತೆ ಕೋರರಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಶೈತ್ಯ ಗೃಹಗಳನ್ನು ನಿರ್ಮಿಸಲು ಮೀಸಲಿಟ್ಟಿರುವ 50 % ಸ್ಥಳಾವಕಾಶದ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು.ಈ ಮೂಲಕ ಕೃಷಿ ಉತ್ಪನ್ನಗಳನ್ನು ಸರ್ಕಾರಿ ಜಾಗದಲ್ಲಿ ಸಂಗ್ರಹಿಸಿಟ್ಟುಕೊಂಡು ಬೆಲೆ ಏರಿಸುವ ಕಾಳಸಂತೆಕೋರರ ಸಂಚನ್ನು ತಡೆಗಟ್ಟಬೇಕು.

ಬಹಳ ಮುಖ್ಯವಾಗಿ ಭದ್ರಾವತಿಯಲ್ಲಿ ಇರುವ ಮೈಸೂರು ಕಾಗದ ಕಾರ್ಖಾನೆ ತಕ್ಷಣ ಪ್ರಾರಂಭಿಸಿ ಸ್ಥಳೀಯ ಯುವಕರಿಗೆ ಕನಿಷ್ಠ ಶೇ. 70ರಷ್ಟು ಉದ್ಯೋಗ ಮೀಸಲಾತಿ ಮಾಡಬೇಕು.

ಈ ಎಲ್ಲಾ ಪ್ರಮುಖ ಅಂಶಗಳನ್ನು ಚಳಿಗಾಲದ ಅಧಿವೇಶನದಲ್ಲಿ ಸರಕಾರವು ಮಂಡಿಸಿ ಸದಸ್ಯರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಶಿವಮೊಗ್ಗ ಆಮ್ಆದ್ಮಿಪಕ್ಷ  ಆಗ್ರಹಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AAPBhadravathiKannada NewsKannada News LiveKannada News OnlineKannada News WebisteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಆಮ್ ಆದ್ಮಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Previous Post

ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಚಿವ ಈಶ್ವರಪ್ಪ ಭರವಸೆ

Next Post

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL