ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಹೆಚ್ಚು ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ನೋಂದಣಿ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕಿದೆ ಎಂದು ಶಾಸಕ ರಘುಮೂರ್ತಿ ಹೇಳಿದರು.
ನಗರದ ವೀರಣ್ಣ ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ 71ನೇ ಸ್ವತಂತ್ರೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷ ಸದಸ್ಯತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಿಜೆಪಿ ಪಕ್ಷ ಬರಿ ಪ್ರಚಾರದಲ್ಲೇ ಕಾಲ ಕಳೆಯುತ್ತಿದ್ದು, ಸುಳ್ಳು ಭರವಸೆ ನೀಡಿ ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿದೆ. ಸುಮಾರು ವ?ಗಳ ಕಾಲ ಕಾಂಗ್ರೆಸ್ ಉತ್ತಮವಾದ ಅಭಿವೃದ್ದಿ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದು, ಕಾಂಗ್ರೆಸ್‌ನ ಯಾವ ಪ್ರಧಾನ ಮಂತ್ರಿಗಳು ವೈಭವಿಕರಣ ಮಾಡಲಿಲ್ಲಾ. ಆದರೆ ಬಿಜೆಪಿ ಪ್ರಧಾನಿ ಉಡುಗೆ-ತೊಡುಗೆ ದೇಶ ವಿದೇಶ ಸುತ್ತುವುದು ಇದೆ ಅವರ ಸಾಧನೆಯಾಗಿದೆ ಎಂದು ಆರೋಪಿಸಿದ್ದಾರೆ.
ಅಭಿವೃದ್ಧಿ ಮಾಡಿದವರು ಸುಮ್ಮನಿದ್ದಾರೆ. ಅಭಿವೃದ್ಧಿಯೇ ಮಾಡದವರು ಅಬ್ಬರದಲ್ಲಿದ್ದಾರೆ. ಇದು ಮುಂದಿನ ದಿನಗಳಲ್ಲಿ ಎಲ್ಲಾರು ಅರ್ಥ ಮಾಡಿಕೊಳ್ಳಬೇಕು. ಜನ ಬದಲಾಗಬೇಕು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಬೇಕು. ಅಭಿವೃದ್ಧಿ ಕಾಣಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗೆ ಮಾಡಿದಂತಹ ಅಭಿವೃದ್ಧಿ ಇಲ್ಲಿಯವರೆಗೂ ಯಾರ ಕೈಲು ಮಾಡಲಾಗಿಲ್ಲ ಆದುದರಿಂದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣಿ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಲಪಡಿಸಬೇಕಿದೆ ಎಂದರು.
ಪುರಸಭೆ ಮಾಜಿ ಸದಸ್ಯ ಹೆಚ್.ಎಸ್. ಸೈಯದ್, ನಗರಸಭೆ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಮುಖಂಡ ಚೌಳೂರು ಪ್ರಕಾಶ್, ತಳುಕು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸೌಭಾಗ್ಯಮ್ಮ ತಿಪ್ಪೇಸ್ವಾಮಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಪ್ರಭಾರಿ ಅಧ್ಯಕ್ಷರಾದ ತುನ್ಬಿ, ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ್, ವಿರೂಪಾಕ್ಷ, ರಮೇಶಗೌಡ, ಸಾವಿತ್ರಮ್ಮ ಹಾಗೂ ನಗರಸಭೆ ಮಾಜಿ ಸದಸ್ಯರಾದ ಪ್ರಸನ್ನಕುಮಾರ್ ಮುಖಂಡರಾದ ಪ್ರಕಾಶ್ ಹಾಗೂ ಸೈಯದ್ ಸಾಬ್ ಅನ್ವರ್, ಆಂಜನೇಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post