ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುರುಗುಹ ವಾಗ್ಗೇಯ ಪ್ರತಿಷ್ಠಾನ ಟ್ರಸ್ಟ್ ಹಾಗೂ ಗುರುಗುಹ ಗಾನಸಭಾ ಇವರ ಸಂಯುಕ್ತಾಶ್ರಯದಲ್ಲಿ ಡಿ.14ರಿಂದ 20ರವರೆಗೆ 18ನೇ ವರ್ಷದ ಮಾರ್ಗಶಿರ ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಯ ಹಮ್ಮಿಕೊಳ್ಳಲಾಗಿದೆ.
ನಗರದ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕೀರ್ತಿಶೇಷ ವಿದ್ವಾನ್ ಗುರು ಹೆಚ್.ಆರ್. ಪ್ರಸನ್ನ ವೆಂಕಟೇಶ್ ಅವರಿಗೆ ಸಮರ್ಪಿಸಲಾಗುತ್ತಿದ್ದು, 14ರಂದು ಸಂಜೆ 5:30ಕ್ಕೆ ಸಾಹಿತಿ ವಿಜಯಾ ಶ್ರೀಧರ್ ಸಮಾರಂಭ ಉದ್ಘಾಟಿಸಲಿದ್ದಾರೆ.
ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಲೇಖಕ ಡಾ. ಗುರುದತ್ ಹಾಗೂ ವಿದುಷಿ ರೇವತಿ ಕಾಮತ್ ಉಪಸ್ಥಿತರಿರಲಿದ್ದಾರೆ.
ವಿ.ಸೂ: ಈ 7ದಿನಗಳ ಕಾರ್ಯಕ್ರಮಗಳು facebook.com/musicguruguha ನಲ್ಲಿ ನೇರಪ್ರಸಾರಗೊಳ್ಳಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post