ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸಂಬಂಧಿಸಿದ ಚರ್ಚೆಗಳನ್ನು ಸ್ವಾಗತಿಸುತ್ತೇವೆ. ಕೆಲವು ವಿಚಾರಗಳಲ್ಲಿ ನಿರ್ಧಾರಕ್ಕೆ ಬರಬೇಕೆನ್ನುವ ಉದ್ದೇಶವಿದೆ ಎಂದು ತಿಳಿಸಿದರು.
(ವರದಿ: ಡಿ.ಎಲ್. ಹರೀಶ್, ಹುಬ್ಬಳ್ಳಿ)
Discussion about this post