No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

kalpa News by kalpa News
December 15, 2021
in ಶಿವಮೊಗ್ಗ
0
ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಅವುಗಳ ಪರಿಹಾರದ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಗ್ರಾಮದ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚಿನ ಸಹಕಾರವಾಗಲಿದೆ ಎಂದರು.

ಗ್ರಾಪಂಗಳಲ್ಲಿ ಗೆದ್ದಿರುವ ಬಹುತೇಕ ಸದಸ್ಯರು ಬಿಜೆಪಿ ಬೆಂಬಲಿತರಾಗಿದ್ದರು. ಅದರಲ್ಲೂ ಪಕ್ಷದ ಬೇರೆ ಬೇರೆ ಸ್ತರದಲ್ಲಿ ಕೆಲಸ ಮಾಡಿದವರಿದ್ದರು. ಹೀಗಾಗಿ ಅವರು ಅರುಣ್ ಎನ್ನುವುದಕ್ಕಿಂತ ಮುಖ್ಯವಾಗಿ ತಾವೇ ಸ್ಪರ್ಧೆ ಮಾಡಿರುವಷ್ಟು ಹುಮ್ಮಸ್ಸಿನಲ್ಲಿ ಚುನಾವಣಾ ಪ್ರಚಾರ ಮಾಡಿ ಮತವನ್ನೂ ಹಾಕಿದ್ದಾರೆಂದು ಹೇಳಿದರು.

ಯಡಿಯೂರಪ್ಪ, ಈಶ್ವರಪ್ಪ, ಸಂಸದ ರಾಘವೇಂದ್ರ, ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ತಮ್ಮದೇ ಚುನಾವಣೆ ಎಂದು ಕ್ಷೇತ್ರದಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಪ್ರಚಾರ ಮಾಡಿದ್ದರು. ಅಲ್ಲದೆ ಇದನ್ನು ಪ್ರತಿಷ್ಟೆಯನ್ನಾಗಿ ಪರಿಗಣಿಸಿದ್ದರು ಎಂದರು.

ಚುನಾವಣೆ ಘೋಷಣೆ ನಂತರ ಪಕ್ಷದ ಕಾರ್ಯಕರ್ತರ ಪಡೆ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ, ಪಕ್ಷದ ವತಿಯಿಂದ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಚುನಾವಣೆಗೆ ಸಿದ್ಧತೆಗಳ ಬಗ್ಗೆ ಚರ್ಚೆ ನಡೆದಿದ್ದು, ಪ್ರತಿ ಪಂಚಾಯಿತಿಗೊಬ್ಬ ಪ್ರಮುಖರನ್ನು ನೇಮಿಸಿದ್ದು, ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದರಿಂದ ಗೆಲುವಿಗೆ ಸಹಕಾರವಾಯಿತು ಎಂದರು.

ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ತಾವೂ ಕೂಡ ಕಾರ್ಯಕರ್ತರ ನೆರವಿನಿಂದ ಪ್ರತೀ ಮತದಾರರನ್ನು ಮೂರು ಬಾರಿ ಸಂಪರ್ಕಿಸಲು ಸಾಧ್ಯವಾಯಿತು. ನಾಯಕರು ನನ್ನ ಮೇಲೆ ಇಟ್ಟ ವಿಶ್ವಾಸದಿಂದ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಪ್ರಚಾರ ನಡೆಸಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರಾಗಿ ಕೆ.ಎಸ್. ಈಶ್ವರಪ್ಪ ಅವರು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಸಹ ನನ್ನ ಗೆಲುವಿಗೆ ಅನುಕೂಲವಾಯಿತು. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಪಕ್ಷದ ಅಭ್ಯರ್ಥಿ ಅರುಣ್ ಅವರಿಗೆ ಜಯಗಳಿಸಿದ್ದಾರೆ. ಈ ಗೆಲುವಿನ ಹಿಂದೆ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರ ಶ್ರಮವಿದೆ. ಅದರಲ್ಲೂ ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದರು.

ಆರಂಭದಿಂದಲೂ ಮತದಾರರ ನಿಖರ ಅಂಕಿಅಂಶಗಳನ್ನಿಟ್ಟುಕೊಂಡು ಪ್ರಚಾರ ಮಾಡಲಾಗಿತ್ತು. ಆದರೆ ವಿರೋಧ ಪಕ್ಷದವರು ಸುಳ್ಳು ಅಂಕಿ ಅಂಶಗಳನ್ನು ಪ್ರಕಟಿಸುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದರು. ಇದರ ಹೊರತಾಗಿಯೂ ಮತದಾರರು ಕೈ ಹಿಡಿದಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು. ಮುಂದೆ ಬರಲಿರುವ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬಿ.ಕೆ. ಶ್ರೀನಾಥ್, ಎಸ್.ಎನ್. ಚನ್ನಬಸಪ್ಪ, ಶಿವರಾಜ್, ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ಎಸ್. ರಮೇಶ್, ವಾಗೀಶ್, ಹೃಷಿಕೇಶ್ ಪೈ, ಎನ್.ಡಿ. ಸತೀಶ್, ಗೀತಾ, ಕೆ.ವಿ. ಅಣ್ಣಪ್ಪ ಇದ್ದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Araga GnanendraB S YadiyurapaD S ArunK S EshwarappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಆರಗ ಜ್ಞಾನೇಂದ್ರಕೆ.ಎಸ್. ಈಶ್ವರಪ್ಪಡಿ.ಎಸ್. ಅರುಣ್ಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೆಗ್ಗಾನ್ ಬೋಧನಾ ಆಸ್ಪತ್ರೆಯ ವಿದ್ಯಾರ್ಥಿಗಳ ಪುಂಡಾಟ: ವೈದ್ಯಕೀಯ ಅಧೀಕ್ಷಕರಿಗೆ ದೂರು

Next Post

ಅರಣ್ಯವಾಸಿಗಳ ಹಕ್ಕು, ಹಿತಾಸಕ್ತಿಗಳ ಬಗ್ಗೆ ಸಂಸತ್ ಗಮನಸೆಳೆದ ಸಂಸದ ರಾಘವೇಂದ್ರ

kalpa News

kalpa News

Next Post
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಅರಣ್ಯವಾಸಿಗಳ ಹಕ್ಕು, ಹಿತಾಸಕ್ತಿಗಳ ಬಗ್ಗೆ ಸಂಸತ್ ಗಮನಸೆಳೆದ ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL