No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆ ಮಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2021
in ಬೆಳಗಾವಿ
0
ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ತರಾತುರಿಯಲ್ಲಿ ರಾಜ್ಯ ಸರ್ಕಾರ ಮಂಡಿಸಿದೆ.

ಮಂಗಳವಾರ  ವಿಧಾನಸಭೆಯಲ್ಲಿ ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ನೀಡಿದರು. ಇದಕ್ಕೆ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ತಮಗೆ ಮತಾಂತರ ನಿಷೇಧ ವಿಧೇಯಕದ ಪ್ರತಿ ಕೊಟ್ಟಿಲ್ಲ ಮತ್ತು ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ಮಂಡಿಸುತ್ತೀರಿ? ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದು ತಾರತಮ್ಯ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಅಧಿವೇಶನದ ದ್ವಿತೀಯಾರ್ಧಕ್ಕೆ ವಿಧಾನಸಭೆಯ ಎಲ್ಲ ಸದಸ್ಯರು ಸಭಾಂಗಣ ಪ್ರವೇಶಿಸುವ ಮುನ್ನವೇ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿರುವುದು ಸರಿಯಲ್ಲ. ಎಲ್ಲ ಸದಸ್ಯರು ಸಭಾಂಗಣ ಪ್ರವೇಶಿಸುವವರೆಗೆ ಸ್ಪೀಕರ್ ಏಕೆ ಕಾಯಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ವೇಳೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021ನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ, ಚರ್ಚೆ ಮಾಡೋಣ. ನಾವು ಈಗಾಗಲೇ ಈ ಬಗ್ಗೆ ಹೇಳಿದ್ದೆವು ಎಂದು ಬಿಎಸ್ ವೈ ತಿಳಿಸಿದರು.

ಕದ್ದುಮುಚ್ಚಿ ಮಸೂದೆಯನ್ನು ಪ್ರಸ್ತಾಪ ಮಾಡೋದೇಕೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆಮಾಡಿದರು. ಈ ವೇಳೆ ಸಿಟ್ಟಾದ ಸಭಾಧ್ಯಕ್ಷರು, ಕದ್ದು ಮುಚ್ಚಿ ಯಾಕೆ ಎಂದು ಹೇಳ್ತೀರಾ? ಪೂರಕ ಕಾರ್ಯಸೂಚಿ ಹಾಕಿದ್ದೇವೆ. ಕದ್ದು ಮುಚ್ಚಿ ಮಾಡುವ ಪ್ರಶ್ನಯೇ ಇಲ್ಲ. ನಿಮ್ಮ ವಿರೋಧ ಇದ್ದರೆ, ನೀವು ಚರ್ಚೆ ಮಾಡಿ. ಸರ್ಕಾರ ಕಳ್ಳತನದಿಂದ ಮಾಡುತ್ತಿಲ್ಲ ಎಂದ ಸಭಾಧ್ಯಕ್ಷರು, ಎಲ್ಲರ ಟೇಬಲ್ ಮೇಲೆ ಬಿಲ್ ನ ಕಾಪಿ ಇದೆ. ಕದ್ದುಮುಚ್ಚಿ ಎಂಬ ಮಾತನ್ನು ಡಿ.ಕೆ.ಶಿವಕುಮಾರ್ ಹಿಂದಕ್ಕೆ ಪಡೆಯಬೇಕು ಎಂದು ಹೇಳಿದರು.

ಯಾಕೆ ಈ ಬಿಲ್ ಅನ್ನು ಬೆಳಗ್ಗೆ ಪ್ರಸ್ತಾಪ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಕಾಗೇರಿ, ನಿನ್ನೆ ರಾತ್ರಿ ಕಾರ್ಯಸೂಚಿಯನ್ನು ಸಿದ್ಧಪಡಿಸುವಾಗ ಈ ಬಿಲ್ ಇನ್ನು ಪ್ರಿಂಟ್ ಆಗಿರಲಿಲ್ಲ. ಮುಂಜಾನೆ ಇದು ಪ್ರಿಂಟ್ ಆಗಿತ್ತು. ಅಲ್ಲದೆ, ಸರ್ಕಾರ ಸದನದಲ್ಲಿ ಬಿಲ್ ಅನ್ನು ಪ್ರಸ್ತಾಪಿಸಲು ಹೇಳಿದರು. ಅದರಂತೆ ಈಗ ಮಂಡನೆ ಮಾಡಲಾಗಿದೆ. ಈ ವಿಧೇಯಕವನ್ನು ಮಂಡಿಸಿರುವ ವಿಷಯದಲ್ಲಿ ನಿಮ್ಮದೆಯಾದ ಅಭಿಪ್ರಾಯವನ್ನು ಸದನದಲ್ಲಿ ವ್ಯಕ್ತಪಡಿಸಿದ್ದೀರಿ. ನಾನು ನಿಯಮಾವಳಿ ಪ್ರಕಾರ, ಈ ವಿಧೇಯಕವನ್ನು ಮಂಡಿಸಿದ್ದೇನೆ. ನಾಳೆ ಇದನ್ನು ಚರ್ಚೆಗೆ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು..

ಈ ಬಿಲ್ ಅನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ಆರ್ಟಿಕಲ್ 25ರ ಉಲ್ಲಂಘನೆಯಾಗಿದೆ. ಇಂತಹ ಜನವಿರೋಧಿ ಕಾನೂನುಗಳನ್ನು ತಂದು ಪಾಸು ಮಾಡುವುದು ಸರಿಯಲ್ಲ. ಈ ರೀತಿ ನಡೆಯೋದಕ್ಕೆ ನಾವು ಒಪ್ಪಿಕೊಳ್ಳಲು ತಯಾರಿ ಇಲ್ಲ. ಮಸೂದೆಯ ಪ್ರಸ್ತಾವನೆಗೆ ತಮ್ಮ ವಿರೋಧ ಇದೆ. ಇಂಥ ಕೆಟ್ಟ ಸರ್ಕಾರ, ಕರ್ನಾಟಕ ಇತಿಹಾಸದಲ್ಲಿ ಬಂದಿರಲಿಲ್ಲ. ನಾಳೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡೋಣ ಅಂತಾ ಹೇಳಿದ್ದೀರಿ. ಈಗ ನೋಡಿದ್ರೆ ಈ ಬಿಲ್ ಅನ್ನು ಮಂಡಿಸಿ ನಾಳೆ ಚರ್ಚೆ ಮಾಡೋಣ ಅಂತಾ ಹೇಳುತ್ತಿದ್ದೀರಿ. ಇದು ಹೇಗೆ ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಮಾತನಾಡಿದ ಸಭಾಧ್ಯಕ್ಷ, ಸದಸ್ಯರಿಗೆಲ್ಲರಿಗೂ ಚರ್ಚೆಗೆ ಅನಕೂಲವಾಗಲಿ ಎಂದು ಇವತ್ತು ಬಿಲ್ಲನ್ನು ಮಂಡಿಸಿದ್ದೇನೆ. ಆ ಬಿಲ್ ಕಾಪಿ ನಿಮ್ಗೆ ಇವತ್ತೇ ಕೊಟ್ಟಿದ್ದರಿಂದ ನಾಳೆ ನಿಮ್ಮ ಚರ್ಚೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನು ಸದಸ್ಯರು ಅರ್ಥ ಮಾಡಿಕೊಳ್ಳಬೇಕು. ಕರ್ನಾಟಕದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021 ರ ಬಿಲ್ ಅನ್ನು ಡಿ.ಕೆ.ಶಿವಕುಮಾರ್ ಅವರು ಹರಿದು ಹಾಕಿದ್ದು ಸದನದಿಂದ ಸರಿಯಾದ ಸಂದೇಶ ಅಲ್ಲ ಎಂದ ಸಭಾಧ್ಯಕ್ಷರು, ವಿರೋಧ ಪಕ್ಷದ ಸಚೇತಕರನ್ನು ಕರೆದು ಈ ರೀತಿ ಅಜೆಂಡ್ ರೆಡಿ ಮಾಡಲಾಗಿದೆ. ನಿಮ್ಮ ನಾಯಕರ ಗಮನಕ್ಕೂ ತನ್ನಿ ಎಂದು ತಿಳಿಸಿದ್ದೆ. ಹೀಗಾಗಿ, ನಾಳೆ ಈ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡುತ್ತೇನೆ. ಒಂದು ದಿನ ಮೊದಲೇ ನಿಮ್ಮ ಕೈಗೆ ಮಸೂದೆ ಸಿಗುವ ಹಾಗೆ ಮಾಡಿದ್ದೇನೆ. ನೀವು ನನ್ನನ್ನು ಅಭಿನಂದಿಸಬೇಕು ಎಂದು ಸಭಾಧ್ಯಕ್ಷರು ಹೇಳಿದರು.

ಮತ್ತೆ ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಈ ಸರ್ಕಾರ ಸಂವಿಧಾನದ ಪ್ರಕಾರ ನಡೆಯುತ್ತಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದೀರಿ ಎಂದು ಜರಿದರು. ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ, ಸಭಾಧ್ಯಕ್ಷರು ರೂಲಿಂಗ್ ಕೊಟ್ಟ ಮೇಲೆ ಮತ್ತೆ ವಿಪಕ್ಷದ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಶ ಆಗಿದೆ ಎಂದು ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviConversion Prohibition ActKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಳಗಾವಿಮತಾಂತರ ನಿಷೇಧ ಮಸೂದೆ
Share199Tweet123Send
Previous Post

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

Next Post

ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

February 12, 2026
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

February 12, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

February 12, 2026
ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

February 12, 2026
ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL