ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಸದಸ್ಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಬಿಎಮ್‌ಟಿಸಿಯನ್ನು ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.
2017-18ನೇ ಸಾಲಿನ ಆಯವ್ಯಯ ಅನ್ವಯ ಆಸಲು ಮತ್ತು ಬಡ್ಡಿ ಸಹಾಯಧನ ಯೋಜನೆಯಡಿಯಲ್ಲಿ ಬಿಎಂಟಿಸಿಗೆ 1500 ಡೀಸೆಲ್ ಬಸ್ ಗಳನ್ನು ಖರೀದಿಸಲು ರಾಜ್ಯ ಸರ್ಕಾರ ಘೋಷಿಸಿದ ಅನುದಾನದಲ್ಲಿ 857 ಬಸ್ಸುಗಳನ್ನು ಖರೀದಿಸಲಾಗಿದೆ. ಅದೇ ರೀತಿ, ಪ್ರಸ್ತುತ 643 ಬಸ್ಸುಗಳನ್ನು ಖರೀದಿಸಲು ಟೆಂಡರ್ ಅನ್ನು ಅಂತಿಮಗೊಳಿಸದ್ದು, ಅನುದಾನ ಲಭ್ಯತೆಗೆ ಅನುಗುಣವಾಗಿ 565 ಹವಾನಿಯಂತ್ರಿತವಲ್ಲದ ಸಾಧರಣ ವಾಹನಗಳನ್ನು ಮಾತ್ರ ಖರೀದಿಸಲಾಗುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.
ಒಟ್ಟು 733 ಕೋಟಿ ಸಾಲ ಪಡೆಯಲಾಗಿದೆ. 195 ಕೋಟಿ ರೂ. ಮರು ಪಾವತಿ ಮಾಡಲಾಗಿದ್ದು, ಸಾರಿಗೆ ಸಂಸ್ಥೆಗಳ ಹಳೆಯ ಬಸ್ಸು 8 ಲಕ್ಷ ಕಿ.ಮೀ ಅಥವಾ 11 ವರ್ಷದ ಬಳಿಕ ಒಳಗೊಂಡಂತೆ ಯಾವುದು ಮೊದಲೂ ಅದನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post