ಕಲ್ಪ ಮೀಡಿಯಾ ಹೌಸ್ | ಕೋಟಾ |
ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ಅವಘಡದ ವೇಳೆ ಕಾರ್ಖಾನೆಯ ಆವರಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ರಶೀದ್ ತಿಳಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರ್ಖಾನೆಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸುಮಾರು ಶೇ. ೩೦ ರಷ್ಟು ಬೆಂಕಿಯನ್ನು ಮಾತ್ರ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಟಾ ಪುರಸಭೆಯ ಸಹಾಯಕ ಅಗ್ನಿಶಾಮಕ ಅಧಿಕಾರಿ ದೇವೆಂದರ್ ಗೌತಮ್ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post