ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಮುಂದೂಡುವುದಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31 ಕರ್ನಾಟಕ ಬಂದ್ ಮುಂದೂಡುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ಬಂದ್ಗೆ ಕನ್ನಡ ಚಲನ ಚಿತ್ರರಂಗ ಬೆಂಬಲ ನೀಡಲೇಬೇಕು. ನಮಗೆ ಯಾವುದೇ ರೀತಿಯ ನೈತಿಕ ಬೆಂಬಲ ಬೇಡ. ಅವರಿಗೊಸ್ಕರ ಬಂದ್ ದಿನಾಂಕ ಬದಲಿಸಲು ಸಾಧ್ಯವಿಲ್ಲ ಎಂದರು.
ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಎಂಇಎಸ್ ಮತ್ತು ಶಿವಸೇನಾ ಪುಂಡಾಟಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಂಇಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31 ಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಹೋಟೆಲ್ ಬೆಂಬಲವಿಲ್ಲ:
ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಇಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.
ಬಂದ್ ಗೆ ನಮ್ಮ ಬೆಂಬಲ ಇಲ್ಲ. ಡಿ. 31 ರಂದು ವ್ಯಾಪಾರ ವಹಿವಾಟು ಹೆಚ್ಚಾಗಿರುತ್ತದೆ. ನಾವು ಕೋವಿಡ್ ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ಇದರ ನಡುವೆ ಹೋಟೆಲ್ ಬಂದ್ ಮಾಡಿ ಕರ್ನಾಟಕ ಬಂದ್ ಗೆ ಬೆಂಬಲ ನೀಡಲ್ಲ ಎಂದು ಹೇಳಿದ್ದಾರೆ.
ಎಂಇಎಸ್ ಪುಂಡಾಟಿಕೆಗೆ ನಮ್ಮ ವಿರೋಧ ಇದೆ. ಎಲ್ಲದಕ್ಕೂ ಬಂದ್ ಒಂದೇ ಪರಿಹಾರ ಅಲ್ಲ. ಕರ್ನಾಟಕ ಬಂದ್ ಮಾಡಿದ್ರೆ ನಮಗೆ ತೊಂದರೆ ಆಗುತ್ತೆ. ಹೀಗಾಗಿ ಕರ್ನಾಟಕ ಬಂದ್ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post