ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ನಿನ್ನೆ ತಡರಾತ್ರಿ ಹಾವು ಕಡಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪನ್ವೇಲ್‌ನಲ್ಲಿರುವ ತಮ್ಮ ಫಾರ್ಮ್ ಹೌಸ್’ಗೆ ತಡರಾತ್ರಿ ಸಲ್ಮಾನ್ ಖಾನ್ ವಾಯು ವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಹಾವೊಂದು ಕಚ್ಚಿದ್ದು, ವಿಷ ರಹಿತ ಹಾವು ಕಚ್ಚಿದೆ ಎಂದು ವರದಿಯಾಗಿದೆ.

ಆದರೆ, ಮುಂಜಾಗ್ರತಾ ಕ್ರಮವಾಗಿ ಸಲ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಕಡಿದ ಹಾವು ವಿಷ ರಹಿತವಾದ್ದರಿಂದ ಸಲ್ಮಾನ್’ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















