No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮತ ಕ್ರೋಢೀಕರಣವೇ ಮತಾಂತರ ನಿಷೇಧ ಕಾನೂನಿನ ಉದ್ದೇಶ: ಸಿದ್ದರಾಮಯ್ಯ ಆಕ್ರೋಶ

kalpa News by kalpa News
December 27, 2021
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಲವಂತದ, ಆಸೆ ಆಮಿಷ ಒಡ್ಡಿ ಮೋಸದಿಂದ ಮತಾಂತರ ಮಾಡುವುದಕ್ಕೆ ನಮ್ಮ ಪಕ್ಷದ ವಿರೋಧವೂ ಇದೆ. ಸೆಕ್ಷನ್ 295 ರಡಿ ಕಾನೂನು ಕ್ರಮ ಜರುಗಿಸಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮದುವೆಯ ಕಾರಣಕ್ಕೆ ಮತಾಂತರವಾದರೆ ಹತ್ತು ವರ್ಷಗಳವರೆಗೆ ಶಿಕ್ಷೆ ಕೊಡಬಹುದು ಎಂಬ ನಿಯಮ ಮತಾಂತರ ನಿಷೇಧ ಕಾಯ್ದೆಯಲ್ಲಿ ಇದೆ. ಒಬ್ಬ ಪುರುಷ ಅಥವಾ ಮಹಿಳೆ ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗೋದು ಮತಾಂತರವಾಗುತ್ತಾ? ಇದನ್ನು ನಿರ್ಬಂಧಿಸೋದು ಸಂವಿಧಾನ ಬಾಹಿರವಾಗುತ್ತದೆ. ಮತ ಕ್ರೋಢೀಕರಣವೇ ಮತಾಂತರ ನಿಷೇಧ ಕಾನೂನಿನ ಉದ್ದೇಶ. ಜನರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರುದ್ಯೋಗ, ಭ್ರಷ್ಟಾಚಾರ, ಹಸಿವು, ಬಡತನ ಹೀಗೆ ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಇವುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಸರ್ಕಾರ ಮಾಡುತ್ತಿರುವ ಹುನ್ನಾರ. ಈ ಕಾಯ್ದೆ ಒಂದು ಸೀಮಿತ ಧರ್ಮವನ್ನು ಗುರಿಯಾಗಿಟ್ಟುಕೊಂಡು ಜಾರಿಗೆ ತರುತ್ತಿರುವ ದುರುದ್ದೇಶದ ಕಾಯ್ದೆ ಎಂದು ಆರೋಪ ಮಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ. ಸರ್ಕಾರದಲ್ಲಿ ಆಡಳಿತ ಯಂತ್ರವೇ ಇಲ್ಲದ ಕಾರಣ ಈ ವಿಚಾರ ಯಾವುದೇ ಪರಿಣಾಮ ಬೀರುವುದಿಲ್ಲ. ಅಧಿಕಾರಿಗಳಿಗೆ ವರ್ಗಾವಣೆಗೆ ಲಂಚ ಕೊಟ್ಟು ಸಾಕಾಗಿ ಹೋಗಿದೆ, ಈ ಸರ್ಕಾರ ತೊಲಗಿದರೆ ಸಾಕು ಎಂದು ಅವರಿಗೂ ಅನ್ನಿಸತೊಡಗಿದೆ. ಜನರ ಆಶಯವೂ ಇದೇ ಆಗಿದೆ ಎಂದರು.

ಕೊರೊನಾ ಹಿನ್ನೆಲೆಯ ರಾತ್ರಿ ಕರ್ಫ್ಯೂಗೂ ಹಾಗೂ ನಮ್ಮ ಪಕ್ಷದ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ. ಪಾದಯಾತ್ರೆಯನ್ನು ನಾವು ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳೊಂದಿಗೆ ಮಾಡುತ್ತೇವೆ. ಪಾದಯಾತ್ರೆಯ ತಯಾರಿ ಕೆಲಸ ನಡೆಯುತ್ತಿದೆ. ಕೊರೊನಾ ಇದ್ದಾಗಲೇ ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಿದ್ದಾರೆ, ಈಗ ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಅವರು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ನಮಗೆ ಬೇರೆ ಅವರಿಗೆ ಬೇರೆ ಎಂದು ಎರಡೆರಡು ಕಾನೂನು ಇದೆಯಾ? ಹೀಗಾಗಿ ನಮ್ಮ ಪಾದಯಾತ್ರೆಗೆ ಸರ್ಕಾರ ಯಾವುದೇ ರೀತಿಯ ಕಡಿವಾಣ ಹಾಕಲು ಬರಲ್ಲ ಎಂದರು.

2009 ರ ನವೆಂರ್ 5 ರಂದು ಚಿದಾನಂದ ಮೂರ್ತಿ ಅವರ ನಾಯಕತ್ವದಲ್ಲಿ ಜೈದೇವ್, ನರಹರಿ, ಬಿ.ಎನ್ ಮೂರ್ತಿ, ಆರ್.ಲೀಲಾ, ಮತ್ತೂರ್ ಕೃಷ್ಣಮೂರ್ತಿ ಮುಂತಾದ ಆರ್.ಎಸ್.ಎಸ್ ಮೂಲದ ನಾಯಕರು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರೂಪಿಸುವಂತೆ ಕಾನೂನು ಸಮಿತಿಗೆ ಮನವಿ ನೀಡಿದ್ದರು. ಇದರ ಜೊತೆಗೆ ಮಧ್ಯಪ್ರದೇಶದಲ್ಲಿ ಬಲವಂತದ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದ್ದಾರೆ. ಆ ಕಾನೂನು ಸರಿಯಾಗಿದೆ, ತಾವು ದಿ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮವನ್ನು ಮಾದರಿಯಾಗಿಟ್ಟುಕೊಂಡು, ಆ ಕಾನೂನಿನಲ್ಲಿ ಮಧ್ಯಪ್ರದೇಶ ತೆಗೆದು ಕರ್ನಾಟಕ ಎಂಬ ಪದ ಹಾಕಿದರೆ ಸಾಕು ಎಂದು ಸಲಹೆ ನೀಡಿದರು.

ಮಣಿ ಭಟ್ ಅವರು ಕಾನೂನು ಸಮಿತಿ ಅಧ್ಯಕ್ಷರಾಗಿದ್ದರು, ಅವರು ಒಂದು ಕರಡು ಪ್ರತಿ ರೂಪಿಸಿ ಸರ್ಕಾರಕ್ಕೆ ಕಳುಹಿಸಿದ್ದರು. 2015 ರಲ್ಲಿ ನಾನು ಅದನ್ನು ಸಚಿವ ಸಂಪುಟದ ಮುಂದೆ ಇಡುವಂತೆ ಸಹಿ ಮಾಡಿದ್ದೆ. ನಂತರ ಆ ಕಡತ ಸಮಾಜ ಕಲ್ಯಾಣ ಸಚಿವರಾಗಿದ್ದ ಆಂಜನೇಯ ಅವರ ಬಳಿ ಹೋಗಿತ್ತು, ನಾನೇ ಆಂಜನೇಯ ಅವರಿಗೆ ಅದನ್ನು ಚರ್ಚೆಗೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿ ಕಡತವನ್ನು ಕ್ಲೋಸ್ ಮಾಡಿಸಿದ್ದೆ. ಬಿಜೆಪಿಯವರು ಬರೀ ಸುಳ್ಳು ಹೇಳುವವರಿಂದಲೇ ತುಂಬಿದೆ. ನರೇಂದ್ರ ಮೋದಿ ಅವರಿಂದ ಹಿಡಿದು ಎಲ್ಲರೂ ಬರೀ ಸುಳ್ಳು ಹೇಳೋರೆ ಎಂದರು.

ಈ ಹಿಂದಿನ ಮತಾಂತರ ನಿಷೇಧ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಇದನ್ನು ಆರ್.ಎಸ್.ಎಸ್ ನವರೇ ಮಾಡಿಸಿದ್ದು ಎಂದು ಈಶ್ವರಪ್ಪನವರೂ ಒಪ್ಪಿಕೊಂಡಿದ್ದಾರೆ. ಹೀಗಿದ್ದಾಗ ನಮ್ಮ ಪಾತ್ರ ಏನಿರಲು ಸಾಧ್ಯ? ಎಂದು ಪ್ರಶ್ನಿಸಿದರು.

ಬಿಟ್ ಕಾಯಿನ್ ಹಗರಣ, 40% ಕಮಿಷನ್ ಪ್ರಕರಣ, ರೈತ ವಿರೋಧಿ ಕಾನೂನುಗಳ ವಾಪಾಸಾತಿ ಮುಂತಾದ ವಿಚಾರಗಳ ಚರ್ಚೆ ಮಾಡಬೇಕು, ಸದನವನ್ನು ಒಂದು ವಾರ ವಿಸ್ತರಿಸಿ ಎಂದು ಹಲವು ಬಾರಿ ಮನವಿ ಮಾಡಿದೆ. ಸರ್ಕಾರ ಇದಕ್ಕೆ ಅವಕಾಶ ನೀಡದೆ ತರಾತುರಿಯಲ್ಲಿ ಸದನ ಮುಗಿಸಿತು. ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಬೆಂಗಳೂರುಸಿದ್ದರಾಮಯ್ಯ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯುತ್ ಚಾಲಿತ ಬಿಎಂಟಿಸಿ ಬಸ್ ಗಳ ಲೋಕಾರ್ಪಣೆ…

Next Post

ಕುವೆಂಪು ವಿವಿಯಲ್ಲಿ ಭರದಿಂದ ಸಾಗಿದ ಸ್ನಾತಕೋತ್ತರ ಪದವಿ ಪ್ರವೇಶಾತಿ

kalpa News

kalpa News

Next Post
ಕುವೆಂಪು ವಿವಿಯಲ್ಲಿ ಭರದಿಂದ ಸಾಗಿದ ಸ್ನಾತಕೋತ್ತರ ಪದವಿ ಪ್ರವೇಶಾತಿ

ಕುವೆಂಪು ವಿವಿಯಲ್ಲಿ ಭರದಿಂದ ಸಾಗಿದ ಸ್ನಾತಕೋತ್ತರ ಪದವಿ ಪ್ರವೇಶಾತಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL