ಕಲ್ಪ ಮೀಡಿಯಾ ಹೌಸ್ | ಕಾರವಾರ |
ಜೇನು ಕಡಿತದಿಂದ 16 ಜನ ಮಕ್ಕಳು ಗಂಭೀರ ಗಾಯಗೊಂಡು ಅಸ್ವಸ್ತರಾಗಿರುವ ಘಟನೆ ತಾಲೂಕಿನ ಕಿನ್ನರ ಗ್ರಾಮದಲ್ಲಿ ನಡೆದಿದೆ.
ಶಾಲೆಗೆ ಬರುತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ಕಡಿದ ಪರಿಣಾಮ ಮಕ್ಕಳನ್ನು ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಹಿನ್ನೆಲೆ:
ಇಂದು ಬೆಳಗ್ಗೆ ಮಕ್ಕಳು ಶಾಲೆಗೆ ತೆರಳುತ್ತಿದ್ದಾಗ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನ ಮರದಲ್ಲಿ ಗೂಡ ಕಟ್ಟಿದ್ದ ಜೇನು ನೊಣ ಏಕಾ ಏಕಿ ದಾಳಿ ಮಾಡಿದೆ. ಇದರಿಂದ 20 ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿದೆ. ತಕ್ಷಣದಲ್ಲಿ 16 ಜನ ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಚ್ಚಿದ್ದು ಗಂಭೀರ ಗಾಯಗೊಂಡ ಇವರನ್ನು ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ ರವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ಸ್ಥಿತಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೇನು ದಾಳಿಯಿಂದ ಮಕ್ಕಳಿಗೆ ಹೆಚ್ಚಿನ ಹಾನಿ ಆಗಿದ್ದು, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಿಳಿಸಲಾಗಿದೆ. ಹಾಗೂ ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವು ಗೊಳಿಸಲು ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post