ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಸಂಘಟಿತ ಕಾರ್ಮಿಕರಿಗೆ ಸಹಕಾರಿಯಾಗಿರುವ ಇ-ಶ್ರಮ್ ಯೋಜನೆಯಡಿಯಲ್ಲಿ ಸರ್ಕಾರದಿಂದ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅರ್ಹರಿಗೆ ಸಹಕಾರ ನೀಡುತ್ತೇವೆ ಎಂದು ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಹೇಳಿದರು.
ಸವಿತಾ ಸಮಾಜದಲ್ಲಿ ಇ-ಶ್ರಮ್ ಕಾರ್ಡ್ ನೋಂದಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕ ಸ್ಟೇಟ್ ಕನ್ಸಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ಬಾಬು ಹಾಗು ಸರ್.ಎಂ. ವಿಶ್ವೇಶ್ವರಾಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಅಧ್ಯಕ್ಷ ಬಾಬು ಯೋಜನೆಯ ಮಹತ್ವ ಕುರಿತು ವಿವರಿಸಿದರು.
ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಸವಿತಾ ಸಮಾಜದ ಪದಾಧಿಕಾರಿಗಳು, ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post