ಕಲ್ಪ ಮೀಡಿಯಾ ಹೌಸ್ | ಸೊರಬ |
ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ.
ಆನವಟ್ಟಿ ಪಟ್ಟಣದ ಚಾಮರಾಜ ಬಡಾವಣೆಯ ತರುಣ್ (18) ಮೃತ ದುರ್ಧೈವಿ. ಆನವಟ್ಟಿಯಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತ್ತಿದ್ದ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ತರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತರುಣ್ ಆನವಟ್ಟಿಯ ಭವಾನಿ ಹಾರ್ಡ್ ವೇರ್ ಮಾಲೀಕರ ಪುತ್ರನಾಗಿದ್ದು, ಉದಯೋನ್ಮುಖ ಕ್ರಿಕೇಟ್ ಆಟಗಾರನಾಗಿದ್ದನು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post