ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಓಮಿಕ್ರಾನ್ ಹಿನ್ನೆಲೆಯಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಸಮಯವನ್ನು ಬೆಂಗಳೂರಿನಲ್ಲಿ ಇಂದಿನ ಮಟ್ಟಿಗೆ ಬದಲಾವಣೆ ಮಾಡಲಾಗಿದ್ದು, ಹೊಸ ವರ್ಷದ ಸಂಭ್ರಮಾಚಣೆಗೆ ಸಂಪೂರ್ಣ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ.31ರ ಇಂದು ಸಂಜೆ 6 ಗಂಟೆಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಜನವರಿ 1ರ ಬೆಳಗಿನ ಜಾವ 5 ಗಂಟೆಗೆ ಕೊನೆಗೊಳ್ಳಲಿದೆ.
ಹೊಸ ಸಂಭ್ರಮಾಚರಣೆ ಬ್ರೇಕ್:
ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚಿನ ಜನ ಸೇರದೆ ಇರುವಂತೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ರಾತ್ರಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಹೆಚ್ಚಿನ ಜನ ಸೇರಿ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡದೆ, ಮನೆಯ ಒಳಗೆ ಸಂಭ್ರಮಾಚರಣೆ ಮಾಡುವುದು. ಇದರ ಹೊರತಾಗಿ ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಮನೋರಂಜನಾ ಕಾರ್ಯಕ್ರಮ, ಡಿಜೆ ಪಾರ್ಟಿಗಳನ್ನು ಮಾಡುವುದು ಹಾಗೂ ಜನ ಸೇರುವುದನ್ನು ಸರ್ಕಾರ ನಿಬಂಧಿಸಿದ್ದು, ಇದರ ಕಟ್ಟುನಿಟ್ಟಿನ ಜಾರಿಗೆ ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post