ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣಕ್ಕೆ ಬೆಂಗಳೂರಿನ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಕೋವಿಡ್ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.

ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳು ಈ ಬಾರಿ ಆಗದಂತೆ ಈಗಿನಿಂದಲೇ ಎಚ್ಚರ ವಹಿಸುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

250 ಹಾಸಿಗೆ ಸಿದ್ಧ ಇದ್ದು, ಪ್ರಕರಣಗಳು ಹೆಚ್ಚಾದಂತೆ ಇವುಗಳ ಬಳಕೆ ಮಾಡಲಾಗುವುದು. ಸದ್ಯ 30 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್ ಘೋಷ್, ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತ ದೀಪಕ್, ಕೆ.ಸಿ.ಜನರಲ್ ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ.ಪುಟ್ಟಸ್ವಾಮಯ್ಯ ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















