ಕಲ್ಪ ಮೀಡಿಯಾ ಹೌಸ್ | ಸಾಗರ |
ಕೆಪಿಸಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಕುಡಿಯುವ ನೀರಿಗಾಗಿ ಹಿನ್ನೀರಿನಲ್ಲಿ ಅಳವಡಿಸಿಕೊಂಡಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ರೈತರಿಗೆ ಕೃಷಿ ಮಾಡಲು ಹಾಗೂ ಕೆಪಿಸಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಚಿಕಿತ್ಸೆ ನೀಡದೆ ವಿನಾಕಾರಣ ತೊಂದರೆ ಕೊಡುತ್ತಿರುವ ಕೆಪಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಶಾಸಕ ಹೆಚ್. ಹಾಲಪ್ಪ ಅವರು ಕಾರ್ಗಲ್ KPC ಮುಖ್ಯ ಅಭಿಯಂತರ ಕಚೇರಿ ಮುಂಭಾಗದಲ್ಲಿ ಧರಣಿ ನೆಡೆಸಿದರು.

ಸದರಿ ವಿಷಯಗಳ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಮನವರಿಕೆ ಮಾಡಿದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಸ್ಥಳೀಯರಿಗೆ ಇನ್ನು ಮುಂದೆ ಯಾವುದೇ ರೀತಿಯ ತೊಂದರೆ ನೀಡುವುದಿಲ್ಲವೆಂಬ ಆಶ್ವಾಸನೆ ಕೊಟ್ಟ ಬಳಿಕ ಶಾಸಕರು ಪ್ರತಿಭಟನೆ ಮೊಟಕುಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















