ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಸಾಹಿತ್ಯ ಲೋಕದಲ್ಲಿ ಚಂಪಾ ಎಂದೇ ಪ್ರಖ್ಯಾತವಾದ ಕವಿ, ನಾಟಕಕಾರ ಪ್ರೊ. ಚಂದ್ರಶೇಖರ ಪಾಟೀಲ (೮೨) ನಿಧನರಾಗಿರುವುದು ನೋವಿನ ಸಂಗತಿ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಚಂಪಾ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರಲ್ಲಿ ಚಂಪಾ ಮೊದಲಿಗರು ಎಂದರು.
ಸಾಹಿತಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ, 1939ರ ಜೂನ್ 18ರಂದು ಜನಿಸಿದ ಚಂಪಾ ಅವರ ಹುಟ್ಟೂರು ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು. ಸಾಹಿತಿ, ಹೋರಾಟಗಾರ ಚಂಪಾ ಅವರು ಕರುನಾಡಿನ ಅಪಾರ ಸಾಹಿತ್ಯ ವಲಯವನ್ನು ಅಗಲಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲ ರವೀಶ್, ಉಪನ್ಯಾಸಕಿ ಲತಾ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post